HomeKarnatakaBIG NEWS: ಪಾಕ್ ಪರ ಘೋಷಣೆ ಪ್ರಕರಣ; ವಿಧಾನಸಭೆಗೆ ರಾಷ್ಟ್ರಧ್ವಜ ಹಿಡಿದು ಬಂದ ಬಿಜೆಪಿ ಸದಸ್ಯರು;...

BIG NEWS: ಪಾಕ್ ಪರ ಘೋಷಣೆ ಪ್ರಕರಣ; ವಿಧಾನಸಭೆಗೆ ರಾಷ್ಟ್ರಧ್ವಜ ಹಿಡಿದು ಬಂದ ಬಿಜೆಪಿ ಸದಸ್ಯರು; ಸ್ಪೀಕರ್ ಆಕ್ಷೇಪ

ಬೆಂಗಳೂರು: ವಿಧಾನಸಭೆ ಆವರಣದಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪ ಪ್ರಕರಣ ವಿಧಾನಸಭೆಯಲ್ಲಿ ಗದ್ದಲ-ಕೋಲಾಹಲಕ್ಕೆ ಕಾರಣವಾಯಿತು.

ಕಲಾಪ ಆರಂಭಕ್ಕೂ ಮುನ್ನ ವಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಸುನೀಲ್ ಕುಮಾರ್ ಸೇರಿದಂತೆ ಬಿಜೆಪಿ ಸದಸ್ಯರು ರಾಷ್ಟ್ರಧ್ವಜವನ್ನು ಹಿಡಿದು ವಿಧಾನಸಭೆ ಪ್ರವೇಶಿಸಿದರು. ಇದಕ್ಕೆ ಸ್ಪೀಕರ್ ಯು.ಟಿ.ಖಾದರ್ ಆಕ್ಷೇಪ ವ್ಯಕಪಡಿಸಿದರು.

ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನಸೌಧದಲ್ಲಿಯೇ ಪಾಕ್ ಪರ ಘೋಷಣೆ ಕೂಗಲಾಗಿರುವುದು ಆತಂಕಕಾರಿ ಬೆಳವಣಿಗೆ. ನಮಗೆ ರಕ್ಷಣೆ ಇದೆಯೇ ಇಲ್ಲವೇ ಎಂಬ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ ಎಂದು ರಾಷ್ಟ್ರಧ್ವಜ ಹಿಡಿದು ಬಂದಿದ್ದೇವೆ ಎಂದರು. ರಾಷ್ಟ್ರಧ್ವಜ ಹಿಡಿದು ವಿಧಾನಸಭೆಗೆ ಬಂದ ರೀತಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಸ್ಪೀಕರ್ ಖಾದರ್, ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಬಿಜೆಪಿ ಸದಸ್ಯರು ಗದ್ದಲವೆಬ್ಬಿಸಿದರು. ಈ ವೇಳೆ ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪ ವಿಚಾರವಾಗಿ ಚರ್ಚೆ ನಡೆಸಿ ಅದನ್ನು ಬಿಟ್ಟು ಗದ್ದಲ ಮಾಡುವುದು ಸರಿಯಲ್ಲ ಎಂದು ಹೇಳಿದರು. ಈ ವೇಳೆ ಆಡಳಿತ ಹಾಗೂ ವಿಪಕ್ಷ ಸದಸ್ಯರ ನಡುವೆ ಗದ್ದಲ-ಕೋಲಾಹಲ ಆರಂಭವಾಗಿ ಕಲಾಪವನ್ನು ಕೆಲ ಕಾಲ ಮುಂದೂದಲಾಯಿತು.

For Latest News Updates, Join Our Whatsapp Community🚩
RELATED ARTICLES

Most Popular