HomeEntertainmentಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್: ನಿರ್ಮಾಪಕ ಕೆ. ಪ್ರಭಾಕರ್ ವಿಧಿವಶ

ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್: ನಿರ್ಮಾಪಕ ಕೆ. ಪ್ರಭಾಕರ್ ವಿಧಿವಶ

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕ ಕೆ. ಪ್ರಭಾಕರ್ ಇಂದು ಮಧ್ಯಾಹ್ನ ಜಯನಗರ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕೆ. ಪ್ರಭಾಕರ್ ಅವರಿಗೆ 64 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳ ಹಿಂದೆ ಹೃದಯಾಘಾತಕ್ಕೆ ಒಳಗಾಗಿದ್ದ ಪ್ರಭಾಕರ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

ವಿಷ್ಣುವರ್ಧನ್, ಅಂಬರೀಶ್, ಶಶಿಕುಮಾರ್, ಉಪೇಂದ್ರ ಅವರ ಚಿತ್ರಗಳನ್ನು ಕೆ. ಪ್ರಭಾಕರ್ ನಿರ್ಮಾಣ ಮಾಡಿದ್ದಾರೆ. ‘ಅವಳೇ ನನ್ನ ಹೆಂಡತಿ’, ‘ಮುದ್ದಿನ ಮಾವ’, ‘ತುಂಬಿದ ಮನೆ’, ‘ಸೋಲಿಲ್ಲದ ಸರದಾರ’, ‘ಅಣ್ಣ –ತಂಗಿ’, ‘ಗ್ಯಾಂಗ್ ಲೀಡರ್’, ‘ಲವ ಕುಶ’ ಸೇರಿದಂತೆ ಹಲವು ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ತೆಲುಗು ಚಿತ್ರರಂಗದಲ್ಲಿಯೂ ಅನೇಕ ಚಿತ್ರಗಳನ್ನು ಅವರು ನಿರ್ಮಾಣ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular