HomeLatest NewsBREAKING NEWS: ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ

BREAKING NEWS: ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ, ಉದ್ಯಮಿ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸದಲ್ಲಿ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ್ದರು. ವಿಷಯ ತಿಳಿಯುತ್ತಿದ್ದಂತೆ ಕುಟುಂಬದವರು ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಸೌಂದರ್ಯ ಜಗದೀಶ್ ಅವರ ದುಡುಕಿನ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಅಪ್ಪು-ಪಪ್ಪು, ಸ್ನೇಹಿತರು, ಮಸ್ತ್ ಮಜಾ ಮಾಡಿ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಿಸಿದ್ದರು. ನಿರ್ಮಾಪಕ ಸೌಂದರ್ಯ ಜಗದೀಶ್, ಇತ್ತೀಚೆಗಷ್ಟೇ ಮಗಳು ಸೌಂದರ್ಯ ಅವರ ವಿವಾಹ ಮಾಡಿದ್ದರು. ಇದೀಗ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದು, ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular