ಪ್ರಗತಿಪರ ಚಿಂತಕ ಪ್ರೊ. ಮಹೇಶ್ ಚಂದ್ರಗುರು ನಿಧನಕ್ಕೆ ಸಿಎಂ ಸಂತಾಪ

ಬೆಂಗಳೂರು: ಎಡಪಂಥೀಯ ಚಿಂತಕ ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ಬಿ.ಪಿ. ಮಹೇಶ್ ಚಂದ್ರಗುರು(67) ಶನಿವಾರ ಸಂಜೆ ಮೈಸೂರಿನ ವಿಜಯನಗರದ ತಮ್ಮ ನಿವಾಸದಲ್ಲಿ ತೀವ್ರ ಹೃದಯಾದಾತದಿಂದ ನಿಧನರಾಗಿದ್ದಾರೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಮೂಲದವರಾದ ಮಹೇಶ್ ಚಂದ್ರಗುರು ಅವರು ಬಂಡಾಯ ಪತ್ರಿಕೆ ‘ಪಂಚಮ’ದಲ್ಲಿ ವರದಿಗಾರ, ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದರು. ಬೆಂಗಳೂರು, ಮಂಗಳೂರು, ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದು, 32 ಗ್ರಂಥಗಳನ್ನು ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ರಚಿಸಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ನನಗೆ ಆತ್ಮೀಯರಾಗಿದ್ದ ಮೈಸೂರಿನ ಪ್ರಗತಿಪರ ಚಿಂತಕ ಡಾ.ಮಹೇಶ್ ಚಂದ್ರಗುರು ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಡಾ.ಮಹೇಶ್ ಚಂದ್ರ ಗುರು ಅವರು ತರಗತಿಗಳಿಂದ ಹೊರಗೆ ಕೂಡಾ ಸಮಾಜಕ್ಕೆ ಮಾರ್ಗದರ್ಶಕರಾಗಿದ್ದರು ಎಂದು ತಿಳಿಸಿದ್ದಾರೆ.

ಬುದ್ದ, ಬಸವ, ಅಂಬೇಡ್ಕರ್ ಚಿಂತನೆಗಳಿಂದ ಪ್ರಭಾವಿತರಾಗಿದ್ದ ಡಾ.ಮಹೇಶ್ ಚಂದ್ರ ಗುರು ಎಂದೂ ಮೌನಕ್ಕೆ ಮೊರೆಹೋಗದೆ ಮತ್ತು ಪರಿಣಾಮವನ್ನೂ ಲೆಕ್ಕಿಸದೆ ನೇರವಾಗಿ ಮತ್ತು ನಿಷ್ಠುರವಾಗಿ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದರು. ಡಾ.ಮಹೇಶ್ ಚಂದ್ರ ಗುರು ಅವರ ನಿಧನದಿಂದ ಸಮಾಜ ಒಬ್ಬ ಚಿಂತನಶೀಲ ಮಾರ್ಗದರ್ಶಕನನ್ನು ಕಳೆದುಕೊಂಡಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.

https://twitter.com/siddaramaiah/status/1824854844810707109

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read