HomeLatest Newsಇಂಜಿನಿಯರಿಂಗ್, ಕೃಷಿ ಸೇರಿ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಇಂದು ಸಿಇಟಿ ಸೀಟು ಹಂಚಿಕೆ ಸಾಧ್ಯತೆ

ಇಂಜಿನಿಯರಿಂಗ್, ಕೃಷಿ ಸೇರಿ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಇಂದು ಸಿಇಟಿ ಸೀಟು ಹಂಚಿಕೆ ಸಾಧ್ಯತೆ

ಬೆಂಗಳೂರು: UGCET/UGNEET-25 ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

ಅಭ್ಯರ್ಥಿಗಳು ವೆಬ್ ಸೈಟ್ ನಲ್ಲಿನ ಲಿಂಕ್ ಮೂಲಕ ಫಲಿತಾಂಶ ಪಡೆಯಬಹುದು.

ಆಕ್ಷೇಪಣೆಗಳು ಇದ್ದಲ್ಲಿ ಇ- ಮೇಲ್ ಮೂಲಕ ಆಗಸ್ಟೆ 2ರಂದು ಬೆಳಿಗ್ಗೆ11ಗಂಟೆ ಒಳಗೆ ಕಳುಹಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇ- ಮೇಲ್ ವಿಳಾಸ: [email protected]

ಅಂತಿಮ ಫಲಿತಾಂಶ ಪ್ರಕಟಣೆಯ ನಂತರ ವೈದ್ಯಕೀಯ ಕೋರ್ಸ್ ಹೊರತುಪಡಿಸಿ ಕೃಷಿ, ಇಂಜಿನಿಯರಿಂಗ್ ಮೊದಲಾದ ಕೋರ್ಸುಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು.

ರಾಷ್ಟ್ರಮಟ್ಟದಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಹೋಮಿಯೋಪತಿ ಕೋರ್ಸುಗಳ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಎನ್ನುವ ಪ್ರಕಟವಾಗದ ಕಾರಣ ಆ ಕೋರ್ಸ್ ಗಳ ಪ್ರವೇಶಕ್ಕೆ ಸದ್ಯಕ್ಕೆ ರಾಜ್ಯದಲ್ಲಿ ಅವಕಾಶ ಇರುವುದಿಲ್ಲ. ಅಲ್ಲಿ ಫಲಿತಾಂಶ ಪ್ರಕಟವಾದ ಬಳಿಕ ಕೋರ್ಸ್ ಗಳ ಪ್ರವೇಶ ಪ್ರಕ್ರಿಯೆ ಆರಂಭಿಸಲಾಗುವುದು.

ಸಿಇಟಿ ಸೀಟು ಹಂಚಿಕೆಯ ನಂತರ ಅಭ್ಯರ್ಥಿಗಳು ತಮಗೆ ದೊರೆತ ಸೀಟಿನ ಬಗ್ಗೆ ಚಾಯ್ಸ್ ನೀಡುವ ಮೂಲಕ ತಮ್ಮ ಇಚ್ಛೆಯನ್ನು ತಿಳಿಸಬೇಕು. ಒಂದು ವೇಳೆ ಚಾಯ್ಸ್ ದಾಖಲಿಸದೆ ಇದ್ದಲ್ಲಿ ಅಂತವರನ್ನು ನಂತರದ ಸುತ್ತಿನಲ್ಲಿ ಸೀಟು ಹಂಚಿಕೆಗೆ ಪರಿಗಣಿಸುವುದಿಲ್ಲ. ಅಲ್ಲದೆ ಅವರನ್ನು ಇಡೀ ಪ್ರಕ್ರಿಯೆಯಿಂದ ಹೊರಹಾಕಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಚಾಯ್ಸ್ -1 ಮತ್ತು ಚಾಯ್ಸ್ -2 ದಾಖಲಿಸಿದ ನಂತರ ಬದಲಾವಣೆಗೆ ಅವಕಾಶ ಇರುವುದಿಲ್ಲ. ಆದರೆ ಚಾಯ್ಸ್ 3 ಮತ್ತು ಚಾಯ್ಸ್ 4 ದಾಖಲಿಸಿದವರು ನಿಗದಿತ ಕೊನೆ ದಿನಾಂಕದೊಳಗೆ ಪುನಃ ವ್ಯವಸ್ಥೆಯೊಳಗೆ ಬಂದು ಚಾಯ್ಸ್ 1 ಅಥವಾ ಚಾಯ್ಸ್ 2 ದಾಖಲಿಸಲು ಈ ಬಾರಿ ಹೊಸದಾಗಿ ಅವಕಾಶ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular