ಹಾಸನ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ 2024-25 ನೇ ಸಾಲಿನಲ್ಲಿ IISc, IIT & NIT ಸಂಸ್ಥೆಗಳ ಮೂಲಕ Artificial Intelligence and Machine Learning ಮುಂತಾದ ವೃತ್ತಿಪರ ತರಬೇತಿ ಕೋರ್ಸ್ ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ 15,000 ರೂ. ಶಿಷ್ಯವೇತನ/ತರಬೇತಿಯನ್ನು ನೀಡುವ ಸಂಬಂಧ ಅರ್ಜಿಯನ್ನು ಆಹ್ವಾನಿಸಲಾಗಿರುತ್ತದೆ.
ಸದರಿ ಅರ್ಜಿ ಆಹ್ವಾನವನ್ನು ದಿನಾಂಕವನ್ನು ಏ.28 ರವರೆಗೆ ವಿಸ್ತರಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಆಯಾ ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿ ಅಥವಾ ಜಿಲ್ಲಾ ಉಪ ನಿರ್ದೇಶಕರ ಕಚೇರಿ, ಹಾಸನ ಇಲ್ಲಿ ಅರ್ಜಿ ನಮೂನೆಗಳನ್ನು ಪಡೆದು ಸಂಬಂಧಪಟ್ಟ ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಇಲ್ಲಿಗೆ ಸಲ್ಲಿಸಲು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.