BREAKING : ವಿದ್ಯಾರ್ಥಿನಿಗೆ ‘ಲೈಂಗಿಕ ಕಿರುಕುಳ’ ಆರೋಪ : ಶಿವಮೊಗ್ಗದ ಸಿಮ್ಸ್ ಮೆಡಿಕಲ್ ಕಾಲೇಜಿನ ಪ್ರೊಫೆಸರ್ ಅರೆಸ್ಟ್.!

ಶಿವಮೊಗ್ಗ : ಶಿವಮೊಗ್ಗದ ಸಿಮ್ಸ್ ಕಾಲೇಜು ಪ್ರೊಫೆಸರ್ ವಿರುದ್ಧ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳವೆಸಗಿರುವ ಆರೋಪ ಕೇಳಿಬಂದಿತ್ತು, ಪ್ರೊಫೆಸರ್ ಬಂಧನಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ತೀವ್ರಗೊಳಿಸಿದ್ದರು.

ಇದೀಗ ಪ್ರೊಫೆಸರ್ ಡಾ. ಅಶ್ವಿನ್ ಹೆಬ್ಬಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆ ಬಳಿಕ ಅಶ್ವಿನ್ ಹೆಬ್ಬಾರ್ ಅವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

ಸಿಮ್ಸ್ ಕಾಲೇಜು ಪ್ರೊಫೆಸರ್ ಡಾ. ಅಶ್ವಿನ್ ಹೆಬ್ಬಾರ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು, ಸಂತ್ರಸ್ತ ವಿದ್ಯಾರ್ಥಿನಿ ಶಿವಮೊಗ್ಗದ ಮಹಿಳಾ ಠಾಣೆಗೆ ದೂರು ನೀಡಿದ್ದು, ಪ್ರೊಫೆಸ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.

ಪ್ರಕರಣ ದಾಖಲಾಗುತ್ತಿದ್ದಂತೆ ಪ್ರೊಫೆಸರ್ ಡಾ.ಅಶ್ವಿನ್ ಹೆಬ್ಬಾರ್ ನಾಪತ್ತೆಯಾಗಿದ್ದರು. ಪ್ರೊಫೆಸರ್ ನನ್ನು ಬಂಧಿಸುವಂತೆ ಆಗ್ರಹಿಸಿ ಸಿಮ್ಸ್ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ತರಗತಿಗಳನ್ನು ಬಹಿಷ್ಕರಿಸಿ ಕೈಗೆ ಕಪ್ಪುಪಟ್ಟಿ ಧರಿಸಿ ಕಾಲೇಜು ಬಳಿ ಪ್ರತಿಭಟನೆ ನಡೆಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read