HomeUncategorizedಅಧಿಕಾರ ದುರ್ಬಳಕೆ ಮಾಡಿಕೊಂಡು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರಾಧ್ಯಾಪಕ ಅಮಾನತು

ಅಧಿಕಾರ ದುರ್ಬಳಕೆ ಮಾಡಿಕೊಂಡು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರಾಧ್ಯಾಪಕ ಅಮಾನತು

ಬೆಳಗಾವಿ: ಅಧಿಕಾರ ದುರ್ಬಳಕೆ ಮಾಡಿಕೊಂಡು ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಕೆ.ಎಲ್.ಎನ್. ಮೂರ್ತಿ ಅವರನ್ನು ಅಮಾನತುಗೊಳಿಸಲಾಗಿದೆ.

ವಿಜಯಪುರ ಸ್ನಾತಕೋತ್ತರ ಕೇಂದ್ರದ ಇತಿಹಾಸ ವಿಭಾಗದ ಮುಖ್ಯಸ್ಥರಾಗಿರುವ ಪ್ರೊಫೆಸರ್ ಕೆ.ಎಲ್.ಎನ್. ಮೂರ್ತಿ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಸಂಶೋಧನಾ ವಿದ್ಯಾರ್ಥಿನಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವರಿಗೆ ದೂರು ನೀಡಿದ್ದರು.

ತಾವು ನೀಡಿದ ದೂರಿನ ಕುರಿತಾಗಿ ಲಿಖಿತ ಹೇಳಿಕೆ ಹಾಗೂ ಆರೋಪಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ಒದಗಿಸಿದ್ದರು. ವಿಶ್ವವಿದ್ಯಾಲಯದ ಆಂತರಿಕ ದೂರು ನಿವಾರಣೆ ಸಮಿತಿ ಈ ಬಗ್ಗೆ ವಿಚಾರಣೆ ನಡೆಸಿ ಆರೋಪಿತ ಪ್ರಾಧ್ಯಾಪಕರ ವಿರುದ್ಧ ಕಾನೂನು ಕ್ರಮಕ್ಕೆ ವರದಿ ಸಲ್ಲಿಸಿದ್ದು, ಈ ಹಿನ್ನೆಲೆಯಲ್ಲಿ ಕುಲಸಚಿವ ಸಂತೋಷ ಕಾಮಗೌಡ ಅವರು ಅಮಾನತುಗೊಳಿಸಿ ಆದೇಶಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular