HomeKarnatakaBREAKING : ಬೆಂಗಳೂರಿನ ಮಹಾರಾಣಿ ಕಾಲೇಜು ಆವರಣದಲ್ಲಿ ಫ್ರೊಫೆಸರ್ ಕಾರು ಡಿಕ್ಕಿ : ಇಬ್ಬರು ವಿದ್ಯಾರ್ಥಿನಿಯರಿಗೆ...

BREAKING : ಬೆಂಗಳೂರಿನ ಮಹಾರಾಣಿ ಕಾಲೇಜು ಆವರಣದಲ್ಲಿ ಫ್ರೊಫೆಸರ್ ಕಾರು ಡಿಕ್ಕಿ : ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

ಬೆಂಗಳೂರು :  ಬೆಂಗಳೂರಿನ  ಮಹಾರಾಣಿ ಕಾಲೇಜು ಆವರಣದಲ್ಲಿ ಫ್ರೊಫೆಸರ್ ಕಾರು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗಳಾದ ಘಟನೆ ಇದೀಗ ನಡೆದಿದೆ ಎಂದು ತಿಳಿದು ಬಂದಿದೆ.

ಮಹಾರಾಣಿ ಕಾಲೇಜು ಆವರಣದಲ್ಲಿಯೇ ಈ ಘಟನೆ ನಡೆದಿದ್ದು, ಇಂಗ್ಲೀಷ್ ಫ್ರೊಫೆಸರ್ ನಾಗರಾಜ್ ಎಂಬುವವರ ಕಾರು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಅಶ್ವಿನಿ ಎಂಬ ವಿದ್ಯಾರ್ಥಿನಿ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಹಾಗೂ ಮ್ಯೂಸಿಕ್ ಟೀಚರ್ ಜ್ಯೊತಿ ಎನ್ನುವವರಿಗೂ ಗಾಯಗಳಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂಗ್ಲೀಷ್ ಫ್ರೊಫೆಸರ್ ನಾಗರಾಜ್ ಬ್ರೇಕ್ ಒತ್ತುವ ಬದಲು ಆ್ಯಕ್ಸಲೇಟರ್ ತುಳಿದಿದ್ದಾರೆ ಎಂದು ಕೂಡ ಹೇಳಲಾಗಿದ್ದು, ಈ ಬಗ್ಗೆ ನಿಖರ ಮಾಹಿತಿ ಲಭ್ಯವಾಗಬೇಕಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular