HomeKarnatakaಅಕ್ಕ ಕೆಫೆ ಮಾದರಿಯಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಮೂಲಕ ಇಂದಿರಾ ಕ್ಯಾಂಟೀನ್ ನಿರ್ವಹಣೆ

ಅಕ್ಕ ಕೆಫೆ ಮಾದರಿಯಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಮೂಲಕ ಇಂದಿರಾ ಕ್ಯಾಂಟೀನ್ ನಿರ್ವಹಣೆ

ಬೆಂಗಳೂರು: ಈ ವರ್ಷದ ಬಜೆಟ್‌ನಲ್ಲಿ ಘೋಷಿಸಲಾಗಿದ್ದ, ಸುಮಾರು 20 ಸಾವಿರ ಐಟಿಐ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಮತ್ತು ಕಮ್ಯುನಿಕೇಶನ್ ಕೌಶಲ್ಯ ತರಬೇತಿ ನೀಡುವ ಕಾರ್ಯಕ್ರಮವನ್ನು ಆದಷ್ಟು ಬೇಗನೆ ಅನುಷ್ಠಾನಗೊಳಿಸಬೇಕು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯುವನಿಧಿ ಯೋಜನೆಯಡಿ ಇದುವರೆಗೆ 1,97,060 ಅಭ್ಯರ್ಥಿಗಳು ನೋ೦ದಾಯಿಸಿದ್ದು, ಇವರ ಪೈಕಿ 1,61,883 ಅರ್ಹ ಫಲಾನುಭವಿಗಳಿಗೆ 216.38 ಕೋಟಿ ರೂ. ನಿರುದ್ಯೋಗ ಭತ್ಯೆ ನೀಡಲಾಗಿದೆ. ಯೋಜನೆಯಡಿ ಅರ್ಹ ಅಭ್ಯರ್ಥಿಗಳ ನೋಂದಣಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಆರಂಭಿಸಲಾಗಿರುವ ಅಕ್ಕ ಕೆಫೆ ಘಟಕಗಳ ಮಾದರಿಯಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ಮಹಿಳಾ ಸ್ವಸಹಾಯ ಸಂಘಗಳ ಮೂಲಕ ನಡೆಸುವ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಲು ಕ್ರಮ ಕೈಗೊಳ್ಳಬೇಕು. ಆರ್ಥಿಕ ಚಟುವಟಿಕೆಗಳಲ್ಲಿ ಗ್ರಾಮೀಣ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಗ್ರಾಮ ಪಂಚಾಯತ್ ಮಟ್ಟದಲ್ಲಿ ಗ್ರಾಮೀಣ ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡಲು ಕ್ರಮ ವಹಿಸಬೇಕು ಎಂದು ಹೇಳಿದ್ದಾರೆ.

ಪ್ರಸ್ತುತ ಬಜೆಟ್‌ನಲ್ಲಿ ಇಲಾಖೆಗೆ 1,864 ಕೋಟಿ ರೂ. ಅನುದಾನ ಹ೦ಚಿಕೆ ಮಾಡಲಾಗಿದ್ದು, ಇದುವರೆಗೆ 1,235 ಕೋಟಿ ರೂ. ವೆಚ್ಚವಾಗಿದೆ. ರಾಜ್ಯದಲ್ಲಿ 50 ವರ್ಷ ಪೂರ್ಣಗೊಳಿಸಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಪಾರಂಪರಿಕ ಸಂಸ್ಥೆಗಳೆಂದು ಘೋಷಿಸಿ ಉನ್ನತೀಕರಣಕ್ಕಾಗಿ 100 ಕೋಟಿ ರೂ. ಒದಗಿಸಲಾಗಿದ್ದು, ಈ ಕಾಮಗಾರಿಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಕೌಶಲ್ಯ ನೀಡಿಕೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದ್ದಾರೆ.

ಸಭೆಯಲ್ಲಿ ಸಚಿವ ಶರಣಪ್ರಕಾಶ್ ಪಾಟೀಲ್ ಸೇರಿ ಹಲವರಿದ್ದರು.

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular