ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಜಾರಿಗೊಳಿಸಲಾಗಿದ್ದ ನಿಷೇಧಾಜ್ಞೆ ಮೇ 4ರಂದು ಅಂತ್ಯವಾಗಲಿದೆ.
ಮೇ 1ರಂದು ಬಜ್ಪೆಯಲ್ಲಿ ರೌಡಿಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.
ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ಹಿನ್ನಲೆಯಲ್ಲಿ ನಿಷೇಧಾಜ್ಞೆ ಅವಧಿಯಲ್ಲಿ ಮಾರ್ಪಾಡು ಮಾಡಿ ಆದೇಶ ಹೊರಡಿಸಲಾಗಿದೆ. ಮೇ 6ರ ಬದಲು ಮೇ 4ರ ಬೆಳಗ್ಗೆ 6 ಗಂಟೆಯವರೆಗೆ ಮಾತ್ರ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ನಗರದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಅವರು ಪರಿಷ್ಕೃತ ಆದೇಶ ಹೊರಡಿಸಿದ್ದಾರೆ.