ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಕಾರ್ಯವು ಮೇ 4 ರಂದು ಡಿ.ಆರ್.ಆರ್. ವಿದ್ಯಾಸಂಸ್ಥೆಯಲ್ಲಿ ನಡೆಯಲಿದೆ.
ಜಿಲ್ಲೆಯಾದ್ಯಂತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 4 ರ ಬೆಳಿಗ್ಗೆ 6 ಗಂಟೆಯಿಂದ ಮೇ 6 ರ ಬೆಳಿಗ್ಗೆ 6 ಗಂಟೆಯವರೆಗೆ ದಾವಣಗೆರೆ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದೆ
ದಾವಣಗೆರೆ ನಗರದಾದ್ಯಂತ ಯಾವುದೇ ರೀತಿಯ ವಿಜಯೋತ್ಸವ ಮೆರವಣಿಗೆ, ರ್ಯಾಲಿ, ಜಾಥಾ ಹಾಗೂ ಸಭೆ-ಸಮಾರಂಭಗಳನ್ನು ನಡೆಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸಾರ್ವಜನಿಕವಾಗಿ ಸಂಭ್ರಮಾಚರಣೆ ಮಾಡುವುದು ಹಾಗೂ ಪಟಾಕಿ ಸಿಡಿಸುವುದಕ್ಕೆ ಅವಕಾಶವಿರುವುದಿಲ್ಲ. ಅಕ್ರಮವಾಗಿ ಗುಂಪು ಸೇರುವುದು ಹಾಗೂ ಘೋಷಣೆಗಳನ್ನು ಕೂಗುವುದನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ. ಅವರು ಆದೇಶ ಹೊರಡಿಸಿದ್ದಾರೆ.

