ಬೆಂಗಳೂರು: ಆಗಸ್ಟ್ 13 ರಿಂದ 27 ರವರೆಗೆ ವಿಧಾನ ಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ವಿಧಾನಸೌಧ ಸುತ್ತಮುತ್ತ ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ಜಾರಿಗೊಳಿಸಲಾಗಿದೆ.
ಫ್ರೀಡಂ ಪಾರ್ಕ್ ನಲ್ಲಿ ಅನುಮತಿ ಪಡೆದು ಪ್ರತಿಭಟನೆ ಹೊರತುಪಡಿಸಿ ವಿಧಾನಸೌಧ ಸುತ್ತಮುತ್ತ ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ ಐದು ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು, ಮೆರವಣಿಗೆ ಮತ್ತು ಸಭೆಗಳನ್ನು ನಡೆಸುವಂತಿಲ್ಲ. ಮಾರಕಾಸ್ತ್ರ ಇಟ್ಟುಕೊಳ್ಳುವಂತಿಲ್ಲ, ಸ್ಫೋಟಕಗಳನ್ನು ಸಿಡಿಸುವಂತಿಲ್ಲ, ಯಾವುದೇ ವ್ಯಕ್ತಿಗಳ ಅಥವಾ ಪ್ರತಿಕೃತಿಗಳ ಪ್ರದರ್ಶನ ಮಾಡುವಂತಿಲ್ಲ.

