HomeKarnatakaಬಡ್ತಿ ನೀಡದಿದ್ದರೆ ರಾಜ್ಯಾದ್ಯಂತ ಪಾಠ, ಪ್ರವಚನ ಸ್ಥಗಿತ: ಪ್ರಾಥಮಿಕ ಶಾಲಾ ಶಿಕ್ಷಕರ ಎಚ್ಚರಿಕೆ

ಬಡ್ತಿ ನೀಡದಿದ್ದರೆ ರಾಜ್ಯಾದ್ಯಂತ ಪಾಠ, ಪ್ರವಚನ ಸ್ಥಗಿತ: ಪ್ರಾಥಮಿಕ ಶಾಲಾ ಶಿಕ್ಷಕರ ಎಚ್ಚರಿಕೆ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಕೂಡಲೇ ಮುಖ್ಯೋಪಾಧ್ಯಾಯರ ಹುದ್ದೆಗೆ ಬಡ್ತಿ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದಲ್ಲಿ ರಾಜ್ಯಾದ್ಯಂತ ಪಾಠ ಪ್ರವಚನ ಸ್ಥಗಿತಗೊಳಿಸಲು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸೇವಾನಿರತ ಪದವೀಧರ ಶಿಕ್ಷಕರನ್ನು ‘ಪದವೀಧರ ಶಿಕ್ಷಕರು’ ಎಂದು ಪರಿಗಣಿಸಬೇಕು. ಹೊಸ 2016 ರ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪೂರ್ವಾನ್ವಯಗೊಳಿಸಬಾರದು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ತಕ್ಷಣವೇ ಮುಖ್ಯೋಪಾಧ್ಯಾಯರ ಹುದ್ದೆಗೆ ಬಡ್ತಿ ನೀಡಬೇಕು ಎಂಬುದಾಗಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ. ನಾಗೇಶ್ ತಿಳಿಸಿದ್ದಾರೆ.

ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸೇವಾನಿರತ ಪದವೀಧರ ಶಿಕ್ಷಕರನ್ನು ಭೇದ ಮಾಡದೆ ಅವರನ್ನು ಪದವೀಧರ ಶಿಕ್ಷಕರು ಎಂದು ಪರಿಗಣಿಸುವಂತೆ ಒತ್ತಾಯಿಸಿದ್ದು, ಬೇಡಿಕೆ ಈಡೇರಿಸುತ್ತಿದ್ದಲ್ಲಿ ಪಾಠ ಬೋಧನೆ ಸ್ಥಗಿತಗೊಳಿಸಿ ಅಸಹಕಾರ ಚಳವಳಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular