HomeKarnatakaಪ್ರೌಢಶಾಲೆ ಶಿಕ್ಷಕರಿಗೆ ಪದವಿ ಪೂರ್ವ ಉಪನ್ಯಾಸಕರ ಹುದ್ದೆಗೆ ಪದೋನ್ನತಿ: ಅಗತ್ಯ ದಾಖಲೆ ಸಲ್ಲಿಕೆಗೆ ಸೂಚನೆ

ಪ್ರೌಢಶಾಲೆ ಶಿಕ್ಷಕರಿಗೆ ಪದವಿ ಪೂರ್ವ ಉಪನ್ಯಾಸಕರ ಹುದ್ದೆಗೆ ಪದೋನ್ನತಿ: ಅಗತ್ಯ ದಾಖಲೆ ಸಲ್ಲಿಕೆಗೆ ಸೂಚನೆ

ಬೆಂಗಳೂರು: ಪ್ರೌಢಶಾಲಾ ಶಿಕ್ಷಕರನ್ನು ಪದವಿ ಪೂರ್ವ ಉಪನ್ಯಾಸಕರ ಹುದ್ದೆಗೆ ಪದೋನ್ನತಿ ನೀಡುವ ಸಂಬಂಧ ಅಗತ್ಯ ದಾಖಲೆಗಳನ್ನು ತುರ್ತಾಗಿ ಸಲ್ಲಿಸುವ ಕುರಿತು ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಉಲ್ಲೇಖ-1ರಲ್ಲಿ ಸರ್ಕಾರಿ ಪ್ರೌಢಶಾಲೆಗಳ ಸಹ ಶಿಕ್ಷಕರ ವೃಂದದಿಂದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವೃಂದಕ್ಕೆ ಬಡ್ತಿ ನೀಡಲು ಅರ್ಹತೆ ಹೊಂದಿರುವ ಸಹ ಶಿಕ್ಷಕರ ಅರ್ಹತಾ ಪಟ್ಟಿಯನ್ನು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ರವರು ಈ ಕಚೇರಿಗೆ ಸಲ್ಲಿಸಿರುತ್ತಾರೆ. ಸದರಿ ಪಟ್ಟಿಯನ್ನು ಪರಿಶೀಲಿಸಿ ಅರ್ಹತೆ ಪಡೆದಿರುವ ಸಹ ಶಿಕ್ಷಕರುಗಳ ಅಗತ್ಯ ದಾಖಲೆಗಳನ್ನು ಸಲ್ಲಿಸಲು ಉಲ್ಲೇಖ-2ರಲ್ಲಿ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ರವರನ್ನು ಕೋರಲಾಗಿತ್ತು. ಅದರಂತೆ ಉಲ್ಲೇಖ-3ರಲ್ಲಿ ಆಯುಕ್ತರು ರಾಜ್ಯದ ಎಲ್ಲಾ ಉಪ ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಇವರಿಗೆ ಅರ್ಹ ಶಿಕ್ಷಕರುಗಳ ಅಗತ್ಯ ಮಾಹಿತಿಗಳನ್ನು ತುರ್ತಾಗಿ ಸಲ್ಲಿಸುವಂತೆ ಸೂಚಿಸಿರುತ್ತಾರೆ. ಆದರೆ ಇದುವರೆವಿಗೂ ಯಾವುದೇ ಜಿಲ್ಲೆಗಳಿಂದ ಮಾಹಿತಿ ಸ್ವೀಕೃತವಾಗಿರುವುದಿಲ್ಲ.

ಅಪೂರ್ಣ ದಾಖಲೆಗಳು ಅಥವಾ ವಿಳಂಬವಾಗಿ ಸಲ್ಲಿಕೆಯಾಗುವ ಮಾಹಿತಿಯಿಂದ ಪದೋನ್ನತಿ ಪ್ರಕ್ರಿಯೆಯಲ್ಲಿ ಅನಗತ್ಯ ವಿಳಂಬ ಉಂಟಾಗುವ ಸಾಧ್ಯತೆ ಇರುವುದರಿಂದ, ಈಗಾಗಲೇ ಉಲ್ಲೇಖ-2ರಲ್ಲಿ ಕೋರಿದಂತೆ ಎಲ್ಲಾ ದಾಖಲೆಗಳನ್ನು ವೈಯಕ್ತಿಕವಾಗಿ ಪರಿಶೀಲಿಸಿ, ಪೂರ್ಣಗೊಳಿಸಿ, ಆದ್ಯತೆಯ ಮೇರೆಗೆ ತ್ವರಿತವಾಗಿ ಸಲ್ಲಿಸುವಂತೆ ತಮ್ಮಲ್ಲಿ ವಿಶೇಷವಾಗಿ ವಿನಂತಿಸಿಕೊಳ್ಳಲಾಗಿದೆ. ಪ್ರೌಢಶಾಲಾ ಶಿಕ್ಷಕರಿಗೆ ಸಮಯೋಚಿತವಾಗಿ ಪದೋನ್ನತಿ ನೀಡುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವರ ಸೇವಾ ಹಿತದೃಷ್ಟಿಯಿಂದ ಮಾತ್ರವಲ್ಲದೆ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದು ಸಹ ಅತ್ಯಂತ ಅಗತ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಉಲ್ಲೇಖ-3ರಲ್ಲಿ ಈಗಾಗಲೇ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆರವರು ಸೂಚಿಸಿರುವಂತೆ ಸದರಿ ವಿಷಯವನ್ನು ಅತ್ಯಂತ ಆದ್ಯತೆಯಿಂದ ಪರಿಗಣಿಸಿ ಅಗತ್ಯ ಕ್ರಮ ಕೈಗೊಂಡು, ದಾಖಲೆಗಳನ್ನು ಒದಗಿಸುವಲ್ಲಿ ಯಾವುದೇ ವಿಳಂಬಕ್ಕೆ ಅವಕಾಶ ನೀಡದೇ ಶಾಲಾ ಶಿಕ್ಷಣ ಇಲಾಖೆಯ ಎಲ್ಲಾ ಜಿಲ್ಲಾ ಉಪ ನಿರ್ದೇಶಕರುಗಳು ಆಯಾ ಜಿಲ್ಲೆಗಳಿಗೆ ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ)ಯ ಜಿಲ್ಲಾ ಉಪ ನಿರ್ದೇಶಕರುಗಳಿಗೆ ತ್ವರಿತವಾಗಿ ಮಾಹಿತಿಗಳನ್ನು ಸಲ್ಲಿಸುವಂತೆ ಈ ಮೂಲಕ ಕೋರಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular