ರಾಜ್ಯದ ಜನತೆಗೆ ಗುಡ್ ನ್ಯೂಸ್: ಮನೆ ಬಾಗಿಲಿಗೆ ಆಸ್ತಿ ದಾಖಲೆ: ಸಚಿವ ಅಶೋಕ್

ಬೆಂಗಳೂರು: ರೈತ ಕುಟುಂಬಗಳ ಮನೆ ಬಾಗಿಲಿಗೆ ಆಸ್ತಿ ದಾಖಲೆ ತಲುಪಿಸಲಾಗುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಕಾರ್ಯಕ್ರಮದ ಅಂಗವಾಗಿ ಗ್ರಾಮ ವಾಸ್ತವ್ಯ ಮಾಡಿದ್ದ ಕಂದಾಯ ಸಚಿವರು ಭಾನುವಾರ ಬೆಳಿಗ್ಗೆ ಗಿರಿಜಮ್ಮ, ಮುನಿಯಪ್ಪ ದಂಪತಿ ಮನೆಯಲ್ಲಿ ಉಪಹಾರ ಸೇವಿಸಿದರು.

ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಹಿಂದೆ ರೈತ ಕುಟುಂಬಗಳು ತಮ್ಮ ಆಸ್ತಿ ಭಾಗ ಮಾಡಿಕೊಳ್ಳುವುದು ಸವಾಲಿನ ಕೆಲಸವಾಗಿತ್ತು. ಜಿಲ್ಲಾಧಿಕಾರಿಗಳ ನಡೆ ಕಾರ್ಯಕ್ರಮ, ಪೌತಿಖಾತೆ ಆಂದೋಲನದ ಮೂಲಕ ಜನರ ಮನೆ ಬಾಗಿಲಿಗೆ ಆಸ್ತಿ ದಾಖಲೆಗಳು ಬರುತ್ತಿವೆ. ಜನರ ಮನೆ ಬಾಗಿಲಿಗೆ ಆಸ್ತಿ ದಾಖಲೆಗಳನ್ನು ತಲುಪಿಸುವ ಮಹತ್ವದ ಸುಧಾರಣೆ ಕ್ರಮವನ್ನು ಸರ್ಕಾರ ತಂದಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read