HomeCrimeಆಸ್ತಿ ವಿಚಾರಕ್ಕೆ ಗಲಾಟೆ: ಕುಡುಗೋಲಿನಿಂದ ಹೊಡೆದು ಮಗನ ಕೊಲೆಗೈದ ತಂದೆ

ಆಸ್ತಿ ವಿಚಾರಕ್ಕೆ ಗಲಾಟೆ: ಕುಡುಗೋಲಿನಿಂದ ಹೊಡೆದು ಮಗನ ಕೊಲೆಗೈದ ತಂದೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಶುಕ್ರವಾರ ತಂದೆ ಮತ್ತು ಮಗನ ನಡುವೆ ಜಗಳ ನಡೆದು ಮಗನ ಕೊಲೆಯಲ್ಲಿ ಅಂತ್ಯವಾಗಿದೆ.

ಗಂಗಾನಾಯ್ಕ್(36) ಕೊಲೆಯಾದ ವ್ಯಕ್ತಿ. ಆತನ ತಂದೆ ಲಿಂಗಾನಾಯ್ಕ್ ಜೊತೆಗೆ ಆಸ್ತಿ ವಿಚಾರಕ್ಕೆ ಗಲಾಟೆಯಾಗಿದೆ. ಜಗಳ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ಲಿಂಗಾನಾಯ್ಕ್ ಕುಡಗೋಲಿನಿಂದ ಮಗನ ಎದೆ ಭಾಗಕ್ಕೆ ಚುಚ್ಚಿದ್ದು, ತೀವ್ರ ರಕ್ತಸ್ರಾವದಿಂದ ಗಂಗಾನಾಯ್ಕ್ ಮೃತಪಟ್ಟಿದ್ದಾನೆ.

ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿಡಿವೈಎಸ್ಪಿ ಕೇಶವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular