HomeUncategorizedಆಸ್ತಿ ಮಾಲೀಕರೇ ಗಮನಿಸಿ : ಇನ್ಮುಂದೆ ಬಿ-ಖಾತಾದಿಂದ ಎ -ಖಾತಾ ಪರಿವರ್ತನೆ ಬಹಳ ಸುಲಭ, ಜಸ್ಟ್...

ಆಸ್ತಿ ಮಾಲೀಕರೇ ಗಮನಿಸಿ : ಇನ್ಮುಂದೆ ಬಿ-ಖಾತಾದಿಂದ ಎ -ಖಾತಾ ಪರಿವರ್ತನೆ ಬಹಳ ಸುಲಭ, ಜಸ್ಟ್ ಹೀಗೆ ಮಾಡಿ.!

ಬೆಂಗಳೂರು : ಬೆಂಗಳೂರಿನಲ್ಲಿ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಹೊಸ ಪೋರ್ಟಲ್ ಆರಂಭವಾಗಿದ್ದು, ಆಸ್ತಿ ಮಾಲೀಕರು ಹೀಗೆ ಅರ್ಜಿ ಸಲ್ಲಿಸಬಹುದು.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ-ಖಾತಾ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್ಲೈನ್ ವ್ಯವಸ್ಥೆಗೆ ಚಾಲನೆ ದೊರೆತಿದೆ.

ಬಿ ಖಾತಾ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ‘ದೀಪಾವಳಿ ಉಡುಗೊರೆ’ ಸಿಕ್ಕಿದ್ದು, ಗ್ರೇಟರ್‌ ಬೆಂಗಳೂರು ಪ್ರಾಧಿಕಾರದಡಿ ಬೆಂಗಳೂರು ನಗರದ ಬಿ ಖಾತಾ ಮಾಲೀಕರಿಗೆ ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೆ ಎ ಖಾತಾ ವಿತರಣೆ ಮಾಡಲಾಗುವುದು. ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೆ ಎ ಖಾತಾ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ, ಎ ಖಾತಾ ಪ್ರಯೋಜನ ಪಡೆದುಕೊಳ್ಳಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ಸಲ್ಲಿಸುವ ವಿಧಾನ

  • ನಿಮ್ಮ ಮೊಬೈಲ್ ಮತ್ತು ಓಟಿಪಿ ಬಳಸಿ https://bbmp.karnataka.gov.in/BtoAKhata
  • ನಿಮ್ಮ ಅಂತಿಮ ಬಿ-ಖಾತೆಯ ಇಪಿಐಡಿ ಸಂಖ್ಯೆಯನ್ನು ನಮೂದಿಸಿ ವಿವರಗಳನ್ನು ಪಡೆಯಿರಿ
  • ಮಾಲೀಕರ ಆಧಾರ್ ದೃಢೀಕರಿಸಿ
  • ನಿವೇಶನವಿರುವ ಸ್ಥಳವನ್ನು ಮತ್ತು ನಿವೇಶನ ಮುಂಭಾಗದ ರಸ್ತೆಯ ಪ್ರಕಾರವನ್ನು ದೃಢಪಡಿಸಿ
  • ಭೂ ಪರಿವರ್ತನೆಯಾದ ಮತ್ತು ಭೂ ಪರಿವರ್ತನೆಯಾಗದ ಎರಡೂ ನಿವೇಶನಗಳು ಅರ್ಹ (ಫ್ಲಾಟ್ಗಳಿಗೆ ಅರ್ಹತೆಯಿಲ್ಲ)
  • ಸ್ವೀಕೃತಿಯನ್ನು ಪಡೆಯಿರಿ
  • ನಗರ ಪಾಲಿಕೆ ವತಿಯಿಂದ ನಿವೇಶನಕ್ಕೆ ಭೇಟಿ ಮತ್ತು ದೃಢೀಕರಣ
  • ಮಾರುಕಟ್ಟೆ ಮೌಲ್ಯದ ಶೇ. 5% ರಷ್ಟು ಮೊತ್ತವನ್ನು “ಏಕ ನಿವೇಶನ” ಅನುಮೋದನೆ ಶುಲ್ಕವಾಗಿ ಹಾಗೂ ಇತರೆ ಶುಲ್ಕಗಳನ್ನು ಪಾವತಿಸುವುದು
  • ಸ್ವಯಂಕೃತ “ಏಕ ನಿವೇಶನ” ಅನುಮೋದನೆಯಾಗಿ ಅರ್ಹತಾನುಸಾರ ಎ-ಖಾತಾ ವಿತರಣೆ
  • 2000 ಚ.ಮೀ.ಗೂ ಹೆಚ್ಚಿನ :
  • ನೋಂದಾಯಿತ ವಾಸ್ತುಶಿಲ್ಪಿ ಅಥವಾ ಎಂಜಿನಿಯರ್ರನ್ನು ಸಂಪರ್ಕಿಸಿ
    https://bpas.bbmp.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ
  • ಅಗತ್ಯ ದಾಖಲೆಗಳು ಮತ್ತು ಕ್ಯಾಡ್ ಡ್ರಾಯಿಂಗ್ ಅನ್ನು ಅಪ್ ಲೋಡ್ ಮಾಡಿ
  • ಆರಂಭಿಕ ಪರಿಶೀಲನಾ ಶುಲ್ಕ ರೂ.500 ಅನ್ನು ಪಾವತಿಸಿ
  • ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ (ಫ್ಲಾಟ್ಗಳಿಗೆ ಅರ್ಹತೆಯಿಲ್ಲ)
  • ನಿವೇಶನಕ್ಕೆ ಭೇಟಿ ನೀಡುವ ಮೂಲಕ ಪರಿಶೀಲನೆ
  • ಅರ್ಹತಾನುಸಾರ ಅನುಮೋದನೆ
  • ಅನ್ವಯವಾಗುವ ಶುಲ್ಕಗಳ ಪಾವತಿ

  • ಅರ್ಹತಾನುಸಾರ “ಏಕನಿವೇಶನ” ಅನುಮೋದನೆ ಪ್ರಮಾಣಪತ್ರ, ಡ್ರಾಯಿಂಗ್ ಮತ್ತು ಎ-ಖಾತಾ ವಿತರಣೆ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular