HomeKarnatakaರಾಜ್ಯದ ಜನತೆಗೆ ಗುಡ್ ನ್ಯೂಸ್: ಆಸ್ತಿ ವಿವರ ಸಂಪೂರ್ಣ ಡಿಜಿಟಲೀಕರಣ; ಡ್ರೋನ್ ಸರ್ವೆ

ರಾಜ್ಯದ ಜನತೆಗೆ ಗುಡ್ ನ್ಯೂಸ್: ಆಸ್ತಿ ವಿವರ ಸಂಪೂರ್ಣ ಡಿಜಿಟಲೀಕರಣ; ಡ್ರೋನ್ ಸರ್ವೆ

ಬೆಂಗಳೂರು: ರಾಜ್ಯಾದ್ಯಂತ ಡ್ರೋನ್ ಮೂಲಕ ಭೂಮಿ ಸರ್ವೆ ಕಾರ್ಯ ಪೂರ್ಣಗೊಳಿಸಿ ಆಸ್ತಿ ವಿವರಗಳನ್ನು ಸಂಪೂರ್ಣ ಡಿಜಿಟಲ್ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ.

ವಿಕಾಸ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವರ್ಷದಲ್ಲಿ ಡ್ರೋನ್ ಮೂಲಕ ಸರ್ವ ಕಾರ್ಯ ಪೂರ್ಣಗೊಳಿಸಲಿದ್ದು, ಆಸ್ತಿ ವಿವರ ಸಂಪೂರ್ಣ ಡಿಜಿಟಲೀಕರಣ ಮಾಡಲಾಗುವುದು. ಈ ಕಾರ್ಯ ಪೂರ್ಣಗೊಂಡ ನಂತರ ಭೂ ವಿವಾದಗಳು, ನಕಲಿ ದಾಖಲೆಗಳ ಸೃಷ್ಠಿ, ಕಂದಾಯ ಕಚೇರಿಗಳಿಗೆ ಅಲೆದಾಡುವುದು ತಪ್ಪುತ್ತದೆ, ಭ್ರಷ್ಟಾಚಾರಕ್ಕೆ ಕಡಿವಾಣ ಬೀಳುತ್ತದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ವೆ ಕಾರ್ಯಕ್ಕಾಗಿ 258 ಕೋಟಿ ನೀಡಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ರಾಮನಗರದಲ್ಲಿ ಯೋಜನೆಗೆ ಪ್ರಾಯೋಗಿಕ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular