HomeKarnatakaತೆರಿಗೆದಾರರಿಗೆ ಗುಡ್ ನ್ಯೂಸ್: ಆಸ್ತಿ ತೆರಿಗೆ ಪಾವತಿ ಮೇಲೆ ಶೇ.5ರಷ್ಟು ರಿಯಾಯಿತಿ ಘೋಷಿಸಿದ ಬೆಳಗಾವಿ ಮಹಾನಗರ...

ತೆರಿಗೆದಾರರಿಗೆ ಗುಡ್ ನ್ಯೂಸ್: ಆಸ್ತಿ ತೆರಿಗೆ ಪಾವತಿ ಮೇಲೆ ಶೇ.5ರಷ್ಟು ರಿಯಾಯಿತಿ ಘೋಷಿಸಿದ ಬೆಳಗಾವಿ ಮಹಾನಗರ ಪಾಲಿಕೆ

ಬೆಳಗಾವಿ: ಆಸ್ತಿ ತೆರಿಗೆ ಪಾವತಿಸುವವರಿಗೆ ಬೆಳಗಾವಿ ಮಹಾನಗರ ಪಾಲಿಕೆ ಸಿಹಿ ಸುದ್ದಿ ನೀಡಿದೆ. ಶೇ.5 ರಷ್ಟು ರಿಯಾಯಿತಿ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

2026-27ನೇ ಸಾಲಿನಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಆಸ್ತಿಗಳ ಆಸ್ತಿ ತೆರಿಗೆಯನ್ನು ಸಂಪೂರ್ಣವಾಗಿ ಪಾವತಿಸುವ ತೆರಿಗೆದಾರರಿಗೆ ಆಸ್ತಿ ತೆರಿಗೆ ಮೇಲೆ ಶೇ.5 ರಷ್ಟು ರಿಯಾಯಿತಿಯ ಸೌಲಭ್ಯವಿರುತ್ತದೆ.

ತೆರಿಗೆದಾರರಿಗೆ ತಮ್ಮ ಆಸ್ತಿ ತೆರಿಗೆಯನ್ನು ಆನ್‌ಲೈನ್ ಮೂಲಕ ಪಾವತಿಸುವ ಸೌಲಭ್ಯವನ್ನು ಕಲ್ಪಿಸುವ ಸಲುವಾಗಿ “Online Payment Integration of property tax” ಸಾಪ್ಟವೇರ್‌ನ್ನು ಪಾಲಿಕೆಯ ವತಿಯಿಂದ ಅಭಿವೃದ್ಧಿ ಪಡಿಸಲಾಗಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸ್ತಿ ತೆರಿಗೆದಾರರು ಈಗಾಗಲೇ ತಮ್ಮ ಆಸ್ತಿ ತೆರಿಗೆಯ ಕುರಿತು PID Number ಇರುವ ಗಣಕೀಕೃತ ಫಾರ್ಮ-1 ಪಡೆದವರು ಬೆಳಗಾವಿ-1 ಕೇಂದ್ರಗಳಲ್ಲಿ ಹಾಗೂ Debit Card/Credit Card/Net Banking ಮೂಲಕವು ಆಸ್ತಿ ತೆರಿಗೆ ಪಾವತಿಸಬಹುದಾಗಿದೆ.

ಆನ್‌ಲೈನ್ ಮೂಲಕ ಆಸ್ತಿ ತೆರಿಗೆಯನ್ನು ಪಾವತಿಸುವ ವಿಧಾನಗಳು. ಆಸ್ತಿ ತೆರಿಗೆದಾರರು ಪಾಲಿಕೆಯ ವೆಬ್‌ಸೈಟ್ www.belagavicitycorp.org  ಗೆ Visit ಮಾಡಬಹುದು ಎಂದು ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular