BIG NEWS: ರಾಜ್ಯದಲ್ಲಿ ಆಸ್ತಿ ತೆರಿಗೆ ವಸೂಲಿಯಲ್ಲಿ ಮಹತ್ತರ ಬದಲಾವಣೆ: ಜಿಯೋ ಟ್ಯಾಗ್ ವ್ಯವಸ್ಥೆ ಜಾರಿ

ಬಳ್ಳಾರಿ: ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹದಲ್ಲಿ ಮಹತ್ವದ ಬದಲಾವಣೆಯಾಗಲಿದ್ದು, ಇದಕ್ಕಾಗಿ ಜಿಯೋ ಟ್ಯಾಗ್ ವ್ಯವಸ್ಥೆ ಬರಲಿದೆ. ಶೀಘ್ರದಲ್ಲಿ ರಾಜ್ಯದಾದ್ಯಂತ ಜಾರಿಗೊಳಿಸಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಹೇಳಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದ ಬಹುತೇಕ ಎಲ್ಲಾ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ನಿರ್ಮಾಣಗೊಂಡಿರುವ ಬಡಾವಣೆಗಳಲ್ಲಿ ಅಧಿಕೃತವಾಗಿ ಹಾಗೂ ಇನ್ನೂ ಕೆಲವು ಪರವಾನಿಗೆ ಪಡೆಯದೇ ಅನಧಿಕೃತವಾಗಿ ನಿರ್ಮಾಣಗೊಂಡಿರುವ ಎಲ್ಲಾ ಕಟ್ಟಡಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಅದಕ್ಕೆ ಪೂರಕವಾಗಿ ಸ್ಥಳೀಯ ಸಂಸ್ಥೆಗಳಿಗೆ ಸಂದಾಯವಾಗಬೇಕಾದ ಭಾರೀ ಪ್ರಮಾಣದ ತೆರಿಗೆ ವಸೂಲಾಗದೇ ಬಾಕಿ ಉಳಿಯುತ್ತಿರುವುದನ್ನು ಸರ್ಕಾರವು ವಸೂಲಿಗೆ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದರು.

ಹಾಗಾಗಿ ಸ್ಥಳೀಯ ಸಂಸ್ಥೆಗಳಿಗೆ ನಿಯಮಾನುಸಾರವಾಗಿ ಸಾರ್ವಜನಿಕರಿಂದ ಪಾವತಿಯಾಗಬೇಕಾದ ತೆರಿಗೆ ವಸೂಲಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬಿಬಿಎಂಪಿ ಮಾದರಿಯಲ್ಲಿ ಎಲ್ಲಾ ಆಸ್ತಿಗಳನ್ನು ಎ ಮತ್ತು ಬಿ ಖಾತಾಗಳನ್ನಾಗಿ ವಿಂಗಡಿಸಿ, ರಾಜ್ಯದಾದ್ಯಂತ ಏಕರೀತಿಯ ಕರವಸೂಲಾತಿಗೆ ಜಿಯೋ ಟ್ಯಾಗ್ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read