HomeKarnatakaProperty Tax : ಆಸ್ತಿ ತೆರಿಗೆಯಲ್ಲಿ ಶೇ.05 ರಷ್ಟು ಏರಿಕೆ

Property Tax : ಆಸ್ತಿ ತೆರಿಗೆಯಲ್ಲಿ ಶೇ.05 ರಷ್ಟು ಏರಿಕೆ

ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ವಸತಿ ಮತ್ತು ವಾಣಿಜ್ಯ ಉದ್ದೇಶದ ಆಸ್ತಿಗಳ ತೆರಿಗೆಯನ್ನು 2026-27ನೇ ಸಾಲಿಗೆ ಅನ್ವಯವಾಗುವಂತೆ ಹೆಚ್ಚಳ ಮಾಡಲಾಗಿದೆ ಎಂದು ಕಂಪ್ಲಿ ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.

ನಗರಾಡಳಿತ ನಿರ್ದೇಶನಾಲಯದ ಸುತ್ತೋಲೆ ಮತ್ತು ಕರ್ನಾಟಕ ಪುರಸಭೆಗಳ ಕಾಯ್ದೆ 1964ರ ತಿದ್ದುಪಡಿ ನಿಯಮಗಳನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ ಮಾರ್ಗಸೂಚಿಯಂತೆ ಆಸ್ತಿ ತೆರಿಗೆಯನ್ನು ಮಾರುಕಟ್ಟೆ ಮೌಲ್ಯದ ಆಧಾರದ ಮೇಲೆ ಪರಿಷ್ಕರಿಸುವುದು ಕಡ್ಡಾಯವಾಗಿದೆ.

ಕಂಪ್ಲಿ ಪುರಸಭೆ ವ್ಯಾಪ್ತಿಯ ಎಲ್ಲಾ ಆಸ್ತಿ ಮಾಲೀಕರಿಗೆ ಈ ಪರಿಷ್ಕೃತ ದರ ಅನ್ವಯವಾಗಲಿದೆ. ವಸತಿ ಆಸ್ತಿಗಳಿಗೆ ಶೇ.05 ರಷ್ಟು ತೆರಿಗೆ ಹೆಚ್ಚಳ, ವಾಣಿಜ್ಯ ಮತ್ತು ಕೈಗಾರಿಕಾ ಆಸ್ತಿಗಳ ಖಾಲಿ ನಿವೇಶನ ಹಾಗೂ ಕಟ್ಟಡಗಳಿಗೆ ಶೇ.05 ರಷ್ಟು ತೆರಿಗೆ ಹೆಚ್ಚಳ ಮಾಡಲಾಗಿದ್ದು, ಈ ಹೊಸ ದರಗಳು 2026-27ನೇ ಆರ್ಥಿಕ ಸಾಲಿಗೆ ಅನ್ವಯವಾಗಲಿವೆ. ಆಸ್ತಿ ಮಾಲೀಕರು ಈ ಬದಲಾವಣೆಯನ್ನು ಗಮನಿಸಿ, ಪರಿಷ್ಕೃತ ದರದಂತೆ ತೆರಿಗೆ ಪಾವತಿಸಿ ಪುರಸಭೆಯೊಂದಿಗೆ ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular