HomeLatest Newsಪ್ರವಾದಿಯವರ ಬೋಧನೆಗಳು ಮಾನವ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದೆ : ಸಿಎಂ ಸಿದ್ದರಾಮಯ್ಯ

ಪ್ರವಾದಿಯವರ ಬೋಧನೆಗಳು ಮಾನವ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪ್ರವಾದಿಯವರ ಬೋಧನೆಗಳು ಮಾನವ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಿನ್ನೆ ಅರಮನೆ ಮೈದಾನದಲ್ಲಿ ಮಿಲಾದ್ ಸಮಿತಿ ಆಯೋಜಿಸಿದ್ದ “ಅಂತಾರಾಷ್ಟ್ರೀಯ ಮಿಲಾದುನ್ನಬೀ ಸಮಾವೇಶ”ದಲ್ಲಿ ಪಾಲ್ಗೊಂಡು ಮಾತನಾಡಿದರು

ಪರಧರ್ಮ ಸಹಿಷ್ಣುತೆ ಸಂವಿಧಾನದ ಮೂಲ‌ ಆಶಯವಾಗಿದ್ದು ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ. ಪ್ರವಾದಿಯವರ ಬೋಧನೆಗಳು ಮಾನವ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದವು. ಅವರು ಸಮಸ್ತ ಮಾನವಕೋಟಿಗೆ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸೌಹಾರ್ದದ ಮಾರ್ಗಗಳನ್ನು ತೋರಿಸಿದರು. ಬಸವಣ್ಣನವರ ನೇತೃತ್ವದ ಶರಣ ಚಳವಳಿಯೂ ಕೂಡ ಮಾನವ ಕುಲ ಒಂದೇ ಎನ್ನುವ ಮೌಲ್ಯವನ್ನೇ ಸಾರಿತ್ತು. ಪ್ರವಾದಿಗಳು ಶಾಂತಿಯ ಧೂತರು. ಇಡೀ ಮಾನವ ಕುಲ ಶಾಂತಿಗಾಗಿ, ಪರಸ್ಪರತೆ, ಸಹೋದರತ್ವಕ್ಕಾಗಿ ಕೆಲಸ ಮಾಡಬೇಕು ಎನ್ನುವುದು ಪ್ರವಾದಿಗಳ ಬೋಧನೆಯಾಗಿದೆ. ನಮ್ಮ ಸಂವಿಧಾನದ ಮೂಲ ಆಶಯ ಕೂಡ ಭ್ರಾತೃತ್ವ ಮತ್ತು ಪರಧರ್ಮ ಸಹಿಷ್ಣುತೆಯೇ ಆಗಿದೆ. ಆದ್ದರಿಂದ ಸಂವಿಧಾನವನ್ನು ಆಚರಿಸುವುದು, ಪಾಲಿಸುವುದು ನಮ್ಮೆಲ್ಲರ ಗುರಿಯಾಗಲಿ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular