ಮುಂಬೈ: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಸಿನಿಮಾ ನಟಿ ಓರ್ವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.
ಅನುಷ್ಕಾ ಮೋನಿ ಮೋಹನ್ ದಾಸ್ ಬಂಧಿತ ನಟಿ. ಈಕೆ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಳು. ನಟಿಯರಾಗಲು ಬಯಸಿ ಬರುವ ಯುವತಿಯರನ್ನು ಟಾರ್ಗೆಟ್ ಮಾಡಿ ಬಲವಂತವಾಗಿ ವೇಶ್ಯಾವಾಟಿಕೆಗೆ ಎಳೆಯುತ್ತಿದ್ದಳು.
ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ರಹಸ್ಯ ಕಾರ್ಯಾಚರಣೆ ನಡೆಸಿದ ಪೊಲೀಸರು ಅನುಷ್ಕಾ ಮೋನಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಳಿ ವೇಳೆ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ. ಇವರು ಧಾರಾವಾಹಿ ಹಾಗೂ ಬಾಂಗ್ಲಾ ಸಿನಿಮಾಗಳಲ್ಲಿ ನಟಿಸುತ್ತಿದ್ದರು.
ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿರುವ ಮಾಲ್ ವೊಂದರಲಿ ಅನುಷ್ಕಾ ಮೋನಿ ಗಿರಾಕಿಗಳಿಗೆ ಯುವತಿಯರನ್ನು ಭೇಟಿ ಮಾಡಿಸಿ ಬಲೆಗೆ ಕೆಡವುತ್ತಿದ್ದಳು. ಸದ್ಯ ಅನುಷ್ಕಾ ಮೋನಿ ಬಂಧನವಾಗಿದ್ದು ತನಿಖೆ ಮುಂದುವರೆಸಲಾಗಿದೆ.