BREAKING : ಮಂಗಳೂರಲ್ಲಿ ಅಪ್ರಾಪ್ತ ಬಾಲಕಿಯರನ್ನಿಟ್ಟುಕೊಂಡು ‘ವೇಶ್ಯಾವಾಟಿಕೆ ದಂಧೆ’ : ನಾಲ್ವರು ಅರೆಸ್ಟ್.!

ಮಂಗಳೂರು: ಅಪ್ರಾಪ್ತ ಬಾಲಕಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮನೆ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯ ನಿಡ್ಡೋಡಿಯಲ್ಲಿ ನಡೆದಿದೆ.

ದಾಳಿ ವೇಳೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಲಾಗಿದೆ. ಮಹೇಶ್, ಯಜ್ಞೇಶ್, ದಿಲೀಪ್ ಹಾಗೂ ಶ್ರೀಕಾಂತ್ ಬಂಧಿತ ಆರೋಪಿಗಳು. ನಿಡ್ಡೋಡಿಯ ಮನೆಯೊಂದರಲ್ಲಿ ಈ ಕೃತ್ಯ ನಡೆಯುತ್ತಿತ್ತು.

ಖಚಿತ ಮಾಹಿತಿ ಆಧಾರದ ಮೇಲೆ ಇನ್ಸ್ ಪೆಕ್ಟರ್ ಸಂದೇಶ್ ನೇತೃತ್ವದ ತಂಡ ದಾಳಿ ನಡೆಸಿದೆ. ಆರೋಪಿ ಮಹೇಶ್ ಎಂಬಾತ ಒಬ್ಬನೇ ಮನೆಯಲ್ಲಿ ವಾಸವಾಗುತ್ತಿದ್ದುದರಿಂದ ಆತನ ಮನೆಯಲ್ಲಿಯೇ ಈ ದಂಧೆ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.

ಆರೋಪಿಗಳ ವಿರುದ್ಧ ಮೂಡಬಿದರೆ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ಸಂತ್ರಸ್ತ ಬಾಲಕಿಯರು ಹಾಗೂ ಆರೋಪಿಗಳು ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

  • ಹೌದು (54%, 222 Votes)
  • ಇಲ್ಲ (33%, 137 Votes)
  • ಹೇಳಲಾಗುವುದಿಲ್ಲ (13%, 53 Votes)

Total Voters: 412

Loading ... Loading ...

Most Read