ಯುವತಿಯರಿಗೆ ಆಮಿಷವೊಡ್ಡಿ ವೇಶ್ಯಾವಾಟಿಕೆ: ಆ್ಯಪ್ ಬಳಸಿ ಜೈಲಿಂದಲೇ ದಂಧೆ ನಡೆಸ್ತಿದ್ದ ಕೈದಿ

ಬೆಂಗಳೂರು: ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ವಿಚಾರಣಾಧೀನ ಕೈದಿ ಸಿಕ್ಕಿಬಿದ್ದಿದ್ದಾನೆ. ಆತನ ಮೂವರು ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣವೊಂದರಲ್ಲಿ ಸದ್ದುಗುಂಟೆಪಾಳ್ಯ ಪೊಲೀಸರಿಂದ ಬಂಧಿತನಾಗಿ ಜೈಲು ಸೇರಿರುವ ಮಂಜುನಾಥ ಅಲಿಯಾಸ್ ಸಂಜು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದುಕೊಂಡೇ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ.

ಆ್ಯಪ್ ಮೂಲಕ ಗಿರಾಕಿಗಳನ್ನು ಸಂಪರ್ಕಿಸುತ್ತಿದ್ದ ಆರೋಪಿ ಹೊರ ರಾಜ್ಯದಲ್ಲಿ ಯುವತಿಯರಿಗೆ ಹಣದ ಆಮಿಷವೊಡ್ಡಿ ನಗರಕ್ಕೆ ಕರೆ ತಂದು ವೇಶ್ಯಾವಾಟಿಕೆಗೆ ಬಳಸಿಕೊಳ್ಳುತ್ತಿದ್ದ. ಹುಳಿಮಾವಿನಲ್ಲಿ ಬಾಡಿಗೆ ಮನೆ ಪಡೆದು ಯುವತಿಯರನ್ನು ಇರಿಸಿದ್ದ. ಇದೇ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಗಿರಾಕಿಗಳಿಗೆ ಮನೆಯ ಲೋಕೇಷನ್ ಕಳುಹಿಸುತ್ತಿದ್ದ ಮಂಜುನಾಥ್ ಗೂಗಲ್ ಪೇ ಮೂಲಕ ಗ್ರಾಹಕರಿಂದ ಹಣ ಪಡೆದುಕೊಳ್ಳುತ್ತಿದ್ದ. ಈ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ಕಾರ್ಯಾಚರಣೆ ನಡೆಸಿ ಮಂಜುನಾಥನ ಸಹಚರರಾದ ಅರುಣ, ರಾಘವೇಂದ್ರ, ದರ್ಶನ ಎಂಬುವರನ್ನು ಬಂಧಿಸಿ ಹುಳಿಮಾವು ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಜೈಲಿನಲ್ಲಿರುವ ಮಂಜುನಾಥನನ್ನು ಬಾಡಿ ವಾರೆಂಟ್ ಮೇರೆಗೆ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read