HomeKarnatakaಕೆಲಸ ಕೊಡಿಸುವುದಾಗಿ ಯುವತಿಯರ ಕರೆತಂದು ಹೈಟೆಕ್ ವೇಶ್ಯಾವಾಟಿಕೆ: ದಂಪತಿ ಅರೆಸ್ಟ್

ಕೆಲಸ ಕೊಡಿಸುವುದಾಗಿ ಯುವತಿಯರ ಕರೆತಂದು ಹೈಟೆಕ್ ವೇಶ್ಯಾವಾಟಿಕೆ: ದಂಪತಿ ಅರೆಸ್ಟ್

ಬೆಂಗಳೂರು: ಇವೆಂಟ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪಟ್ಟೆಗಾರ ಪಾಳ್ಯ ನಿವಾಸಿಗಳಾದ ಪ್ರಕಾಶ್, ಪಾರಿಜಾತ ಬಂಧಿತ ದಂಪತಿ. ಇವರು ರಾಕೇಶ್, ಪೂಜಾ ಎಂದು ಹೆಸರು ಬದಲಿಸಿಕೊಂಡು ದಂಧೆ ನಡೆಸುತ್ತಿದ್ದರು. ಉದ್ಯೋಗ ಕೊಡಿಸುವ ನೆಪದಲ್ಲಿ ಉತ್ತರ ಕರ್ನಾಟಕದ ಬಡ ಹೆಣ್ಣು ಮಕ್ಕಳನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಕೆಲಸ ಕೊಡಿಸದೆ ಹಣದ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ದೂಡುತ್ತಿದ್ದರು.

ತಮಿಳುನಾಡು, ಪಾಂಡಿಚೇರಿ  ರೆಸಾರ್ಟ್ ಗಳಲ್ಲಿ ದಂಧೆ ನಡೆಸುತ್ತಿದ್ದರು. ಮದುವೆ ಇವೆಂಟ್ ಮ್ಯಾನೇಜ್ಮೆಂಟ್ ಹೆಸರಲ್ಲಿ ಪ್ರತಿ ವಾರ ಬೆಂಗಳೂರಿನಿಂದ ತಮಿಳುನಾಡಿಗೆ ಯುವತಿಯರನ್ನು ಕರೆದೊಯ್ದು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಶ್ರೀಮಂತರು, ಉದ್ಯಮಿಗಳು, ರೆಸಾರ್ಟ್ ಗಳಿಗೆ ಭೇಟಿ ನೀಡುತ್ತಿದ್ದವರ ಬಳಿಗೆ ಹೆಣ್ಣು ಮಕ್ಕಳನ್ನು ಕಳಿಸುತ್ತಿದ್ದರು. ಒಬ್ಬರಿಗೆ 25 ರಿಂದ 50 ಸಾವಿರ ರೂ.ವರೆಗೆ ಹಣ ಪಡೆಯುತ್ತಿದ್ದರು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ. ಆರೋಪಿ ದಂಪತಿಯನ್ನು ಬಂಧಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular