ಉಡುಪಿ: ಉಡುಪಿ ಜಿಲ್ಲೆಯ ಹೆರ್ಗ ಗ್ರಾಮದ ಈಶ್ವರ ನಗರದ ಅಪಾರ್ಟ್ಮೆಂಟ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಸೆಕ್ಯೂರಿಟಿ ಗಾರ್ಡ್ ನನ್ನು ಮಣಿಪಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹೊನ್ನಾವರ ತಾಲೂಕು ಜಲವಳ್ಳಿ ಗ್ರಾಮದ ಗಣೇಶ ಗಣಪನಾಯ್ಕ(38) ಬಂಧಿತ ಆರೋಪಿ. ಮನೆಯ ಮಾಲೀಕರು ಬೀಗ ಕೊಟ್ಟು ಹೊರಗೆ ಹೋಗುತ್ತಿದ್ದ ಸಂದರ್ಭ ಬಳಸಿಕೊಂಡು ಮಹಿಳೆಯೊಬ್ಬರನ್ನು ಬಲವಂತವಾಗಿ ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ.
ಮಣಿಪಾಲ ಠಾಣೆ ಪೋಲಿಸರು ಗಣೇಶ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಮಹಿಳೆಯನ್ನು ರಕ್ಷಿಸಿ ಆರೋಪಿ ಗಣೇಶ ನಾಯಕನನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.