HomeKarnatakaBREAKING NEWS: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ; ಸ್ಪಾ ಹೆಸರಲ್ಲಿ ದಂಧೆ ಬೆಳಕಿಗೆ; ಐವರು...

BREAKING NEWS: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ; ಸ್ಪಾ ಹೆಸರಲ್ಲಿ ದಂಧೆ ಬೆಳಕಿಗೆ; ಐವರು ಯುವತಿಯರ ರಕ್ಷಣೆ

ಮೈಸೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ, ಐವರು ಆರೋಪಿಗಳನ್ನು ಬಂಧಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಆಧಾರದಲ್ಲಿ ಪೊಲೀಸರು ದಾಳಿ ನಡೆಸಿದ್ದು, ಐವರನ್ನು ಬಂಧಿಸಲಾಗಿದ್ದು, ಐವರು ಯುವತಿಯರನ್ನು ರಕ್ಷಿಸಲಾಗಿದೆ.

ಮೈಸೂರಿನ ವಿಜಯನಗರದ ರಾಯಲ್ ಇಶಾ ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಒಡನಾಡಿ ಸಂಸ್ಥೆಗೆ ನಾಗರಿಕರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿಜಯನಗರ ಪೊಲೀಸರ ಜೊತೆ ಎಸಿಪಿ ಗಜೇಂದ್ರ ಪ್ರಸಾದ್, ಸ್ಪಾ ಮೇಲೆ ದಾಳಿ ನಡೆಸಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದು, ಯುವತಿಯರನ್ನು ರಕ್ಷಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular