ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಹೊರ ರಾಜ್ಯ, ವಿದೇಶಿ ಯುವತಿಯರ ರಕ್ಷಣೆ

ಬೆಂಗಳೂರು: ಬೆಂಗಳೂರಿನ ಇಂದಿರಾನಗರದ 12ನೇ ಮುಖ್ಯರಸ್ತೆಯಲ್ಲಿರುವ ಸ್ಪಾ ಮೇಲೆ ಇಂದಿರಾನಗರ ಠಾಣೆ ಪೋಲೀಸರು ದಾಳಿ ನಡೆಸಿದ್ದಾರೆ.

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ವಿದೇಶಿ ಹಾಗೂ ಹೊರ ರಾಜ್ಯಗಳ 7 ಯುವತಿಯರನ್ನು ರಕ್ಷಿಸಲಾಗಿದ್ದು, ಆರೋಪಿ ಒಬ್ಬನನ್ನು ಬಂಧಿಸಲಾಗಿದೆ. ಅಸ್ಸಾಂನ ಸಂತನುಧಾರ್ ಬಂಧಿತ ಆರೋಪಿಯಾಗಿದ್ದಾನೆ. ಸ್ಪಾ ಮಾಲೀಕ ಸುರೇಶ್ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಸ್ಪಾದಲ್ಲಿ ಕ್ರಾಸ್ ಮಸಾಜ್, ಬಾಡಿ ಟು ಬಾಡಿ ಮಸಾಜ್, ಹ್ಯಾಪಿ ವೆಡ್ಡಿಂಗ್ ಹೆಸರಲ್ಲಿ ಮಸಾಜ್ ಮಾಡುವುದಾಗಿ ಗ್ರಾಹಕರನ್ನು ಆಕರ್ಷಿಸಲಾಗುತ್ತಿತ್ತು. ಹೊರ ರಾಜ್ಯಗಳ ಯುವತಿಯರನ್ನು ಬಲವಂತವಾಗಿ ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿತ್ತು ಎಂದು ವಿಚಾರಣೆ ವೇಳೆ ಆರೋಪಿ ತಿಳಿಸಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read