HomeKarnatakaಮಸಾಜ್ ಗೆ ಬಂದವರ ಪುಸಲಾಯಿಸಿ ಲೈಂಗಿಕ ಕ್ರಿಯೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ವೇಳೆ ಇಬ್ಬರು...

ಮಸಾಜ್ ಗೆ ಬಂದವರ ಪುಸಲಾಯಿಸಿ ಲೈಂಗಿಕ ಕ್ರಿಯೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ವೇಳೆ ಇಬ್ಬರು ಮಹಿಳೆಯರ ರಕ್ಷಣೆ

ಬೆಂಗಳೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಸ್ಪಾ ಮೇಲೆ ಇಂದಿರಾ ನಗರ ಠಾಣೆ ಪೋಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಇಬ್ಬರು ಹೊರ ರಾಜ್ಯದ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದ್ದು, ಸ್ಪಾ ಮ್ಯಾನೇಜರ್ ನನ್ನು ಬಂಧಿಸಲಾಗಿದೆ.

ಮಣಿ ಬಂಧಿತ ಆರೋಪಿ. ಸ್ಪಾ ಮಾಲೀಕ ಉಪ್ಪೇನ್ ರಾಥಿ ಎಂಬಾತ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಬಲೆ ಬೀಸಲಾಗಿದೆ. ದೊಮ್ಮಲೂರು ಎರಡನೇ ಹಂತದ ಸ್ಪಾವೊಂದರಲ್ಲಿ ಹೊರ ರಾಜ್ಯದ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮೇ 29ರಂದು ಸ್ವಾ ಮೇಲೆ ದಾಳಿ ನಡೆಸಿದ್ದಾರೆ. ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಉತ್ತರ ಪ್ರದೇಶ ಮತ್ತು ನಾಗಾಲ್ಯಾಂಡ್ ಮೂಲದ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ.

ಕ್ರಾಸ್ ಮಸಾಜ್, ಬಾಡಿ ಟು ಬಾಡಿ ಮಸಾಜ್, ಹ್ಯಾಪಿ ವೆಡ್ಡಿಂಗ್ ಸೇವೆಗಳ ಹೆಸರಿನಲ್ಲಿ ಗ್ರಾಹಕರನ್ನು ಬರಮಾಡಿಕೊಂಡು ಲೈಂಗಿಕ ಕ್ರಿಯೆಗೆ ಪುಸಲಾಯಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಗಳು ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದರು ಎಂದು ಹೇಳಲಾಗಿದೆ. ಆರೋಪಿ ಮಣಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಇಂದಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular