HomeKarnatakaBIG NEWS: ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ: ನಾಲ್ವರು ಆರೋಪಿಗಳು ಅರೆಸ್ಟ್

BIG NEWS: ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ: ನಾಲ್ವರು ಆರೋಪಿಗಳು ಅರೆಸ್ಟ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ವಿವಿಧೆಡೆ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಬಿಇಎಲ್ ಬಡಾವಣೆಯಲ್ಲಿ ಹೈಫೈ ಮನೆ ಬಾಡಿಗೆಗೆ ಪಡೆದು ಆರೋಪಿಗಳು ವೇಶ್ಯಾವಾಟಿಕೆದಂಧೆ ನಡೆಸುತ್ತಿದ್ದರು. ಹೊರ ರಾಜ್ಯದಿಂದ ಕೆಲಸಕ್ಕೆಂದು ಬರುವ ಯುವತಿಯರೇ ಇವರ ಟಾರ್ಗೆಟ್. ಕೆಲಸದ ಆಮಿಷವೊಡ್ದಿ ವೇಶ್ಯಾವಟಿಕೆ ದಂಧೆಗೆ ದೂಡುತ್ತಿದ್ದರು.

ಮನೆ ಮಾಲೀಕರಿಗೆ ಮಹಿಳೆಗೆ ಪತಿ ಇಲ್ಲ ಎಂದು ಹೇಳಿ ಮನೆ ಬಾಡಿಗೆ ಪಡೆಯುತ್ತಿದ್ದರು. ಹೀಗೆ ಬಾಡಿಗೆ ಪಡೆದ ಮನೆಯಲ್ಲಿಯೇ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ವಿಷಯ ತಿಳಿದು ದಾಳಿ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. 9 ಯುವತಿಯರನ್ನು ರಕ್ಷಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಧಿತ ಆರೋಪಿಗಳಲ್ಲಿ ಇಬ್ಬರು ಮಹಿಳೆಯರೂ ಇದ್ದು, ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular