ವೇಶ್ಯಾವಾಟಿಕೆ ಸಂತ್ರಸ್ತೆ ವಿಚಾರಣೆ ಅನ್ಯಾಯ, ಶಿಕ್ಷಿಸಲು ಯಾವುದೇ ಕಾನೂನು ಇಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ವೇಶ್ಯಾವಾಟಿಕೆ ಸಂತ್ರಸ್ತೆಯನ್ನು ವಿಚಾರಣೆಗೆ ಗುರಿಪಡಿಸುವುದು ಕಾನೂನು ಪ್ರಕ್ರಿಯೆ ದುರುಪಯೋಗ ಮತ್ತು ಅನ್ಯಾಯಕ್ಕೆ ಕಾರಣವಾಗುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ವೇಶ್ಯಾವಾಟಿಕೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ವಿಚಾರಣಾ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಸಂತ್ರಸ್ತೆ ಸಲ್ಲಿಸಿದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯ ಪೀಠ ಅರ್ಜಿಯನ್ನು ಪುರಸ್ಕರಿಸಿದೆ.

ವೇಶ್ಯಾವಾಟಿಕೆ ಸಂತ್ರಸ್ತೆಯನ್ನು ವಿಚಾರಣೆಗೆ ಗುರಿಪಡಿಸದಂತೆ ಹೇಳಿದ್ದು, ಸಂತ್ರಸ್ತ ಮಹಿಳೆಯ ವಿರುದ್ಧ ವಿಚಾರಣಾ ನ್ಯಾಯಾಲಯ ಪ್ರಕ್ರಿಯೆಯನ್ನು ರದ್ದುಪಡಿಸಿದೆ. ವೇಶ್ಯಾವಾಟಿಕೆ ಸಂತ್ರಸ್ತೆಯನ್ನು ಶಿಕ್ಷಿಸಬೇಕು ಎಂದು ಮಾನವ ಕಳ್ಳ ಸಾಗಣೆ ಕಾಯ್ದೆಯಡಿ ಎಲ್ಲಿಯೂ ಹೇಳಿಲ್ಲ. ಹೀಗಾಗಿ ವೇಶ್ಯಾವಾಟಿಕೆ ಸಂತ್ರತೆಯನ್ನು ವಿಚಾರಣೆಗೆ ಗುರಿಪಡಿಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂಬ ಬಾಂಬೆ ಹೈಕೋರ್ಟ್ ಆದೇಶವನ್ನು ಉಲ್ಲೇಖಿಸಲಾಗಿದೆ.

ವೇಶ್ಯಾವಾಟಿಕೆ ಸಂತ್ರಸ್ತೆಯನ್ನು ಶಿಕ್ಷಿಸಲು ಯಾವುದೇ ಕಾನೂನು ಇಲ್ಲ ಎಂದು ನ್ಯಾಯಪೀಠ ಹೇಳಿದೆ, ವೇಶ್ಯಾವಾಟಿಕೆ ಆರೋಪ ಸಂಬಂಧ ಸಂತ್ರಸ್ತೆ ವಿರುದ್ಧ ಮಾನವ ಕಳ್ಳ ಸಾಗಣೆ ತಡೆ ಕಾಯ್ದೆ 1956ರ ಕಅ 6ರ ಅಡಿಯಲ್ಲಿ ವಿಚಾರಣಾ ನ್ಯಾಯಾಲಯ ಸಂಜ್ಞೇಯ ಅಪರಾಧ ಎಂದು ಪರಿಗಣಿಸಿದೆ. ಆದರೆ ಸಂತ್ರಸ್ತ ಮಹಿಳೆಯನ್ನು ಶಿಕ್ಷಿಸಬೇಕು ಎಂದು ಕಾಯ್ದೆಯ ಕಲಂ 5ರಲ್ಲಿ ಎಲ್ಲಿಯೂ ಹೇಳಿಲ್ಲ. ಹಾಗಾಗಿ ಮಹಿಳೆ ವಿರುದ್ಧ ಮುಂದಿನ ವಿಚಾರಣೆಗೆ ಅನುಮತಿ ನೀಡುವುದು ಕಾನೂನು ಪ್ರಕ್ರಿಯೆಯ ದುರ್ಬಳಕೆಯಾಗುತ್ತದೆ ಮತ್ತು ಅನ್ಯಾಯಕ್ಕೆ ಕಾರಣವಾಗುತ್ತದೆ ಎಂದು ನ್ಯಾಯ ಪೀಠ ಆದೇಶದಲ್ಲಿ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read