HomeKarnatakaಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ: ನಾಲ್ವರು ಆರೋಪಿಗಳು ಅರೆಸ್ಟ್: ಮೂವರು ಮಹಿಳೆಯರ ರಕ್ಷಣೆ

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ: ನಾಲ್ವರು ಆರೋಪಿಗಳು ಅರೆಸ್ಟ್: ಮೂವರು ಮಹಿಳೆಯರ ರಕ್ಷಣೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಕೆಲ ಬಾಡಿಗೆ ಮನೆಗಳಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಮೂವರು ಮಹಿಳೆಯರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ..

ಕೇಂದ್ರ ಅಪರಾಧ ವಿಭಾಗದ ಮಹಿಳಾ ರಕ್ಷಣಾ ದಳದ ಅಧಿಕಾರಿಗಳು ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನ ಟಿ ದಾಸರಹಳ್ಳಿ, ಜರ್ಗನಹಳ್ಳಿ ಮತ್ತು ಮೂಡಲಪಾಳ್ಯ ಪ್ರದೇಶಗಳಲ್ಲಿ ಬಾಡಿಗೆ ಮನೆಗಳಲ್ಲಿ ಮಹಿಳೆಯರನ್ನು ಇರಿಸಿ ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಬಂದ ಹಿನ್ನೆಲೆ ಈ ದಾಳಿ ನಡೆಸಲಾಗಿದೆ. ಕಾರ್ಯಾಚರಣೆ ವೇಳೆ ಮಹಿಳೆಯರನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಲಾಗುತ್ತಿತ್ತು. ವೇಶ್ಯಾವಾಟಿಕೆಗೆ ಅನುಕೂಲ ಮಾಡಿಕೊಡುವಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾದ ಮೂವರು ಮಹಿಳೆಯರು ಮತ್ತು ಓರ್ವ ಪುರುಷನನ್ನು ಬಂಧಿಸಲಾಗಿದೆ.


ಈ ವೇಳೆ ಬಲವಂತವಾಗಿ ವೇಶ್ಯಾವಾಟಿಕೆಗೆ ಒಳಪಡಿಸಲಾಗಿದ್ದ ಹೊರ ರಾಜ್ಯಗಳ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಚಾರಣೆ ವೇಳೆ ಬಂಧಿತರು, ಅಧಿಕ ಹಣ ಗಳಿಸುವ ಉದ್ದೇಶದಿಂದ ವೇಶ್ಯಾವಾಟಿಕೆ ಬಯಸುವ ಪುರುಷರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಬಾಡಿಗೆ ಮನೆಗಳಿಗೆ ಆಹ್ವಾನಿಸಿ, ಅಲ್ಲಿ ವೇಶ್ಯಾವಾಟಿಕೆ ಚಟುವಟಿಕೆಗಳನ್ನು ನಡೆಸಲಾಗುತ್ತಿತ್ತು ಎಂದು ತಪ್ಪೊಪ್ಪಿಕೊಂಡಿದ್ದಾರೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular