HomeKarnatakaವೇಶ್ಯಾವಾಟಿಕೆಗೆ ಪ್ರಚೋದನೆ: ಬೆಂಗಳೂರಿನಲ್ಲಿ 6 ವಿದೇಶಿ ಮಹಿಳೆಯರು ಅರೆಸ್ಟ್

ವೇಶ್ಯಾವಾಟಿಕೆಗೆ ಪ್ರಚೋದನೆ: ಬೆಂಗಳೂರಿನಲ್ಲಿ 6 ವಿದೇಶಿ ಮಹಿಳೆಯರು ಅರೆಸ್ಟ್

ಬೆಂಗಳೂರು: ಅತ್ತ ರಾಯಚೂರಿನ ಮಾನ್ವಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿ, ೧೧ ಆರೋಪಿಗಳನ್ನು ಬಂಧಿಸಿದ್ದ ಘಟನೆ ಬೆನ್ನಲ್ಲೇ ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವೇಶ್ಯಾವಾಟಿಕೆಗೆ ಪ್ರಚೋದನೆ ನೀಡುತ್ತಿದ್ದ 6 ವಿದೇಶಿ ಮಹಿಳೆಯರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ನಗರದ ಕೋರಮಂಗಲ ಚೆಕ್‌ಪೋಸ್ಟ್‌ ಬಳಿ ರಸ್ತೆಯಲ್ಲಿ ನಿಂತು ವಿದೇಶಿ ಮಹಿಳೆಯರು ವೇಶ್ಯವಾಟಿಕೆಗೆ ಪ್ರಚೋದನೆ ನೀಡುತ್ತಿದ್ದ ಆರೋಪ ಕೇಳಿಬಂದಿದೆ. 6 ವಿದೇಶಿ ಮಹಿಳೆಯರು ರಸ್ತೆಯಲ್ಲಿ ನಿಂತು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಗ್ಗೆ ಖಚಿತ ಮಾಹಿತಿ ಆಧಾರದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. 6 ಮಹಿಳೆಯರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಪ್ರಕರಣದಲ್ಲಿ ವಿದೇಶಿ ಮಹಿಳೆಯರ ಪಾಸ್‌ಪೋರ್ಟ್, ವೀಸಾ ಪರಿಶೀಲನೆ ನಡೆಸಲಾಗುತ್ತಿದೆ. ಈ ಸಂಬಂಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular