HomeKarnatakaBREAKING: ಬಸವರಾಜ ಬೊಮ್ಮಾಯಿ, ಹೆಚ್.ಡಿ. ಕುಮಾರಸ್ವಾಮಿ ಪೊಲೀಸ್ ವಶಕ್ಕೆ

BREAKING: ಬಸವರಾಜ ಬೊಮ್ಮಾಯಿ, ಹೆಚ್.ಡಿ. ಕುಮಾರಸ್ವಾಮಿ ಪೊಲೀಸ್ ವಶಕ್ಕೆ

ಬೆಂಗಳೂರು: ವಿಧಾನಸೌಧದ ಬಳಿ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ್ದಾರೆ. 10 ಶಾಸಕರನ್ನು ಸದನದಿಂದ ಅಮಾನತು ಮಾಡಿರುವುದನ್ನು ವಿರೋಧಿಸಿ ವಿಧಾನಸೌಧದ ಬಳಿ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ್ದು, ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸಾಥ್ ನೀಡಿದ್ದಾರೆ.

ಸರ್ಕಾರದ ವಿರುದ್ಧದ ಬಿಜೆಪಿ ಹೋರಾಟದಲ್ಲಿ ಕುಮಾರಸ್ವಾಮಿ ಜೊತೆಯಾಗಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಹೋರಾಟ ನಡೆಸುತ್ತಿದ್ದ ಬಿಜೆಪಿ ಶಾಸಕರು ಹಾಗೂ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಹೆಚ್.ಡಿ. ಕುಮಾರಸ್ವಾಮಿ, ಆರಗ ಜ್ಞಾನೇಂದ್ರ, ಆರ್. ಅಶೋಕ್, ಸುನಿಲ್ ಕುಮಾರ್, ಅಶ್ವತ್ಥ್ ನಾರಾಯಣ ಸೇರಿದಂತೆ ಹಲವು ಬಿಜೆಪಿ ಶಾಸಕರನ್ನು ಪೊಲೀಸರು ವಶಕ್ಕೆ ಪಡೆದು ಬಿಎಂಟಿಸಿ ಬಸ್ ನಲ್ಲಿ ಕರೆದುಕೊಂಡು ಹೋಗಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular