ಗೋ ಹತ್ಯೆ ಸ್ಥಳಕ್ಕೆ ತೆರಳಿದ್ದ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ

ತುಮಕೂರು: ಕುಣಿಗಲ್ ಪಟ್ಟಣದ ಗುಜರಿ ಮೊಹಲ್ಲಾ ಪ್ರದೇಶದಲ್ಲಿ ಗೋ ಹತ್ಯೆ ನಡೆಸಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ತೆರಳಿದ್ದ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ.

ಇದನ್ನು ವಿರೋಧಿಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕುಣಿಗಲ್ ನ ಮದ್ದೂರು ರಸ್ತೆಯ ಗುಜರಿ ಮೊಹಲ್ಲಾ ಪ್ರದೇಶದಲ್ಲಿ ಅಕ್ರಮವಾಗಿ ಗೋವುಗಳ ವಧೆ ಮಾಡಲಾಗುತ್ತಿದೆ ಎನ್ನುವ ಮಾಹಿತಿ ತಿಳಿದ ಬಜರಂಗದಳ ಕಾರ್ಯಕರ್ತರು ಸ್ಥಳಕ್ಕೆ ತೆರಳುತ್ತಿದ್ದ ವೇಳೆ ಅನ್ಯ ಕೋಮಿನ 50ಕ್ಕೂ ಹೆಚ್ಚು ಮಂದಿ ಯುವಕರು ಕಲ್ಲು ಮತ್ತು ಇತರೆ ವಸ್ತುಗಳಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ಆಕ್ರೋಶಗೊಂಡ ಯುವಕರು ಕುಣಿಗಲ್ ಪಟ್ಟಣದ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದು, ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read