ಬೆಂಗಳೂರು: ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ಪೋಸ್ಟರ್ ಅಭಿಯಾನ ಕೈಗೊಂಡ ಹಿನ್ನೆಲೆಯಲ್ಲಿ ಪೋಸ್ಟರ್ ಅಂಟಿಸಿ ಪ್ರತಿಭಟನೆ ನಡೆಸಿದ್ದ ಜೆಡಿಎಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಜೆಡಿಎಸ್ ಪಕ್ಷದ ಮುಖಂಡರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಸಕ್ಷಮ ಪ್ರಾಧಿಕಾರದಿಂದ ಯಾವುದೇ ಅನುಮತಿಯನ್ನು ಪಡೆಯದೇ ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತ ಪೋಸ್ಟರ್ ಅಂಟಿಸಿದ್ದಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ.
‘ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ’ ಎಂಬ ಬರಹ ಇರುವ, ಕ್ಯೂಆರ್ ಕೋಡ್ ಸ್ಕ್ಯಾನ್ ಅಳವಡಿಸಿದ ಪೋಸ್ಟರ್ ಗಳನ್ನು ಅಂಟಿಸಲಾಗಿತ್ತು. ಬೆಂಗಳೂರಿನ ಹಲವು ಕಡೆಗಳಲ್ಲಿ ಜೆಡಿಎಸ್ ನಾಯಕರು ಈ ರೀತಿ ಪೋಸ್ಟರ್ ಗಳನ್ನ ಹಚ್ಚಿದ್ದು, ಹೈಕೋರ್ಟ್ ನಿರ್ದೇಶನ, ಬಿಬಿಎಂಪಿ ನಿಯಮ ಉಲ್ಲಂಘಿಸಿದ್ದಕ್ಕೆ ಎಫ್ಐಆರ್ ದಾಖಲಿಸಲಾಗಿದೆ.