HomeKarnatakaBIG NEWS: ಕಾವೇರಿ, ಮೇಕೆದಾಟು ಸೇರಿ ನಾಡಿನ ಹಿತರಕ್ಷಣಾ ಹೋರಾಟಗಾರರ ವಿರುದ್ಧದ ಪ್ರಕರಣ ವಾಪಸ್ ಗೆ...

BIG NEWS: ಕಾವೇರಿ, ಮೇಕೆದಾಟು ಸೇರಿ ನಾಡಿನ ಹಿತರಕ್ಷಣಾ ಹೋರಾಟಗಾರರ ವಿರುದ್ಧದ ಪ್ರಕರಣ ವಾಪಸ್ ಗೆ ಆಗ್ರಹ

ಬೆಂಗಳೂರು: ಕಾವೇರಿ ಹೋರಾಟ, ಮೇಕೆದಾಟು ಪಾದಯಾತ್ರೆ ಸೇರಿದಂತೆ ನಾಡಿನ ಹಿತರಕ್ಷಣೆ ಸಂಬಂಧಿತ ಹೋರಾಟಗಳಲ್ಲಿ ಭಾಗವಹಿಸಿದ ಹೋರಾಟಗಾರರ ವಿರುದ್ಧ ದಾಖಲಿಸಿದ ಪ್ರಕರಣಗಳನ್ನು ಹಿಂಪಡೆಯುವಂತೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ನೆಲ ಜಲ ಮತ್ತು ಭಾಷೆಯ ಹಿತರಕ್ಷಣೆಗಾಗಿ ಅನೇಕ ಹೋರಾಟಗಳು ನಡೆದಿದ್ದು, ಕಾವೇರಿ ನೀರಿಗೆ ಸಂಬಂಧಿಸಿದಂತೆ ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಹೋರಾಟ, ಪ್ರತಿಭಟನೆ, ಪಾದಯಾತ್ರೆ ನಡೆಸಲಾಗಿದೆ.

ಇಂತಹ ಸಂದರ್ಭದಲ್ಲಿ ಅಂದಿನ ಬಿಜೆಪಿ ಸರ್ಕಾರ ಹೋರಾಟ ನಿಯಂತ್ರಿಸಲು ಶಾಸಕರು, ಮಾಜಿ ಶಾಸಕರು, ಹಿರಿಯ ರಾಜಕಾರಣಿಗಳು, ಕನ್ನಡ ಪರ ಸಂಘಟನೆಗಳು, ರೈತ ಹೋರಾಟಗಾರರು, ಸಾರ್ವಜನಿಕರ ಮೇಲೆ ಸುಳ್ಳು ಪ್ರಕರಣ ದಾಖಲು ಮಾಡಿದೆ. ಇದರಿಂದ ಹಲವರು ನ್ಯಾಯಾಲಯಕ್ಕೆ ಅಲದಾಡುವಂತಾಗಿದ್ದು, ಸಮಸ್ಯೆ ಎದುರಿಸುತ್ತಿದ್ದಾರೆ. ಹೀಗಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ನಿರ್ಣಯ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular