ಸೌಜನ್ಯ ಕೊಲೆ ಪ್ರಕರಣ ಸಮಗ್ರ ತನಿಖೆಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ: ಕಟೀಲ್, ಪೂಂಜಾ ವಿರುದ್ಧ ಆಕ್ರೋಶ

ನವದೆಹಲಿ: ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ದೆಹಲಿಯ ಕರ್ನಾಟಕ ಭವನ ಸಮೀಪ ಶುಕ್ರವಾರ ‘ದೆಹಲಿ ಚಲೋ’ ಪ್ರತಿಭಟನೆ ನಡೆಸಲಾಗಿದೆ. ಈ ವೇಳೆ ಸೌಜನ್ಯ ತಾಯಿ ಕುಸುಮಾವತಿ ಮಾತನಾಡಿ, ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಶಾಸಕ ಹರೀಶ್ ಪೂಂಜಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪುತ್ರಿಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿಸುವುದಾಗಿ ಹೇಳಿದ್ದ ನಳಿನ್ ಕುಮಾರ್ ಕಟೀಲು ಮತ್ತು ಹರೀಶ್ ಪೂಂಜಾ ಅದನ್ನು ಮರೆತೇ ಬಿಟ್ಟಿದ್ದಾರೆ. ಅವರು ನಮ್ಮ ಪರವಾಗಿ ನಿಲ್ಲಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪುತ್ರಿ ಕೊಲೆಯಾಗಿ 12 ವರ್ಷಗಳೆ ಕಳೆದಿದ್ದು, ನಿರಂತರವಾಗಿ ಹೋರಾಟ ನಡೆಸುತ್ತಿದ್ದೇವೆ. ಆದರೆ, ಅತ್ಯಾಚಾರಿಗಳು ನಿರಾತಂಕವಾಗಿ ಓಡಾಡುತ್ತಿದ್ದು, ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಜನಾಂದೋಲನದಲ್ಲಿ ಭಾಷಣ ಮಾಡಿ ಹೋದ ಜನಪ್ರತಿನಿಧಿಗಳು ನಮ್ಮ ನೆರವಿಗೆ ಬಂದಿಲ್ಲ. ಪ್ರಧಾನಿಯವರನ್ನು ಭೇಟಿಯಾಗುವ ಉದ್ದೇಶದಿಂದ ದೆಹಲಿಗೆ ಬಂದಿದ್ದೇವೆ ಎಂದು ತಿಳಿಸಿದ್ದಾರೆ.

ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿ, ಸೌಜನ್ಯ ಕೊಲೆ ಪ್ರಕರಣದ ಸಾಕ್ಷ್ಯ ನಾಶ ಮಾಡಲಾಗಿದೆ. ರಾಜ್ಯದಲ್ಲಿ ಕಾನೂನು ವಿರೋಧಿ ಸರ್ಕಾರ ಇದೆ ಎಂದು ಆರೋಪಿಸಿದ್ದಾರೆ.

ರೈತರ ಹೋರಾಟ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿರುವುದರಿಂದ ಪ್ರತಿಭಟನೆಗೆ ನಡೆಸದಂತೆ ಪೊಲೀಸರು ಮನವೊಲಿಸಿದ್ದು, ನಂತರ ಪ್ರತಿಭಟನಾಕಾರರು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಶನಿವಾರವೂ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read