ಧಾರವಾಡ : ರಾಜ್ಯ ಸರ್ಕಾರ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ 50 ಕ್ಕೂ ಹೆಚ್ಚು ಉದ್ಯೋಗಾಂಕ್ಷಿಗಳನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹೌದು, ಧಾರವಾಡದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತಿತ್ತು. ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿದ ಹಲವರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪೋಲೀಸರ ನಡೆಗೆ ಉದ್ಯೋಗಾಂಕ್ಷಿಗಳು ಹೊರ ಹಾಕಿದ್ದು, ಬೇಸರ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ನಡೆಸಲು ಹಕ್ಕು ಇಲ್ಲವೇ ಎಂದು ಅಸಮಾಧಾನ ಹೊರ ಹಾಕಿದ್ದಾರೆ.
