ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಹೈಕೋರ್ಟ್ ಜಡ್ಜ್ ವಿರುದ್ಧ ಪ್ರತಿಭಟನೆ

ಯಾದಗಿರಿ: ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರು ನ್ಯಾಯಾಲಯದ ಕಲಾಪದ ವೇಳೆ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವುದನ್ನು ಖಂಡಿಸಿ, ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸಾಮೂಹಿಕ ಸಂಘಟನೆಗಳ ಒಕ್ಕೂಟದಿಂದ ಸುರಪುರ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ.

ಹಳೆಯ ಶಿಲಾಯುಗದ ಕಾಲದಲ್ಲಿ ಹೆಣ್ಣು ಮಕ್ಕಳಿಗೋಸ್ಕರ ಕಾದಾಟಗಳು ನಡೆದಿದ್ದು, ಹೆಣಗಳು ಬೀಳುತ್ತಿದ್ದವು. ಯಾರಿಗೆ ಶಕ್ತಿ ಇತ್ತೋ ಅವನು ನಾಯಕನಾಗುತ್ತಿದ್ದ. ಆ ನಾಯಕನಿಗೆ ಆ ಹೆಣ್ಣು ಮಗಳನ್ನು ಒಪ್ಪಿಸಿ ಉಳಿದವರು ಎರಡು ಅಥವಾ ಮೂರನೆಯವರಾಗಿ ಆ ಹೆಣ್ಣು ಮಗಳನ್ನು ಉಪಯೋಗಿಸಿಕೊಳ್ಳಬೇಕಿತ್ತು. ಈ ದುಷ್ಟ ಆಚರಣೆ ಈಗಲೂ ಸುರಪರದಲ್ಲಿದೆ ಎಂದು ಕಲಾಪದ ವೇಳೆ ನ್ಯಾಯಮೂರ್ತಿ ಶ್ರೀಶಾನಂದ ಹೇಳಿಕೆ ನೀಡಿದ್ದ ವಿಡಿಯೋ ವೈರಲ್ ಆಗಿದೆ.

ಇದನ್ನು ಖಂಡಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ರಾಷ್ಟ್ರಪತಿ ಮತ್ತು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಿಗೆ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ಕಾನೂನು ಕ್ರಮಕ್ಕೆ ಮುಂದಾಗಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read