ಅಂಬೇಡ್ಕರ್ ಗೆ ಅಪಮಾನ ಆರೋಪ: ಸಿಮ್ಸ್ ಡೀನ್ ಗೆ ಮಸಿ

ಚಾಮರಾಜನಗರ: ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ -ಸಿಮ್ಸ್ ಡೀನ್ ಡಾ. ಸಂಜೀವ್ ಕುಮಾರ್ ಮುಖಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಬಿ.ಎಸ್.ಪಿ. ಹಾಗೂ ಆಸ್ಪತ್ರೆಯ ಹೊರಗುತ್ತಿಗೆಯ ನೌಕರರು ಪ್ರತಿಭಟನೆ ನಡೆಸಿ ಸಂಜೀವ್ ಕುಮಾರ್ ಗೆ ಮುತ್ತಿಗೆ ಹಾಕಿದ್ದಾರೆ. ಕಾರ್ ಜಖಂಗೊಳಿಸಿ ಮುಖಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರತಿಭಟನಾಕಾರರಿಂದ ಸಂಜೀವ್ ಕುಮಾರ್ ಅವರನ್ನು ರಕ್ಷಿಸಿದ್ದಾರೆ.

ನಂತರ ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು ಡೀನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಹೊರಗುತ್ತಿಗೆ ನೌಕರರಿಗೆ ಅನೇಕ ತಿಂಗಳಿಗಳಿಂದ ವೇತನ ನೀಡಿಲ್ಲ. ಗುರುವಾರ ಈ ವಿಚಾರವಾಗಿ ಮಾತನಾಡಲು ಡೀನ್ ಕಚೇರಿಗೆ ತೆರಳಿದ್ದ ವೇಳೆ ಅಂಬೇಡ್ಕರ್ ಮತ್ತು ಸಂವಿಧಾನ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read