HomeKarnatakaಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ: ಸಚಿವ ಸ್ಥಾನ ವಂಚಿತರ ಬೆಂಬಲಿಗರ ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ: ಸಚಿವ ಸ್ಥಾನ ವಂಚಿತರ ಬೆಂಬಲಿಗರ ಪ್ರತಿಭಟನೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ವಿವಿಧ ಕಡೆ ಆಕ್ರೋಶ ವ್ಯಕ್ತವಾಗಿದೆ. ಸಚಿವ ಸ್ಥಾನ ವಂಚಿತರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಶಾಸಕರಾದ ಎಂ. ಕೃಷ್ಣಪ್ಪ ಮತ್ತು ಪ್ರಿಯ ಕೃಷ್ಣ ಬೆಂಬಲಿಗರು ಬೆಂಗಳೂರಿನ ರಾಜಭವನ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಟಿ.ಬಿ. ಜಯಚಂದ್ರ ಬೆಂಬಲಿಗರು ಸಿಎಂ ಸಿದ್ದರಾಮಯ್ಯ ನಿವಾಸದ ಎದುರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾವೇರಿ ಜಿಲ್ಲೆಯಿಂದ ಯಾರಿಗೂ ಸಚಿವ ಸ್ಥಾನ ನೀಡದಿರುವುದಕ್ಕೆ ಬೇಸರಗೊಂಡು ಜಿಲ್ಲೆಯ ಐವರು ಶಾಸಕರು ಗೈರು ಹಾಜರಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಳವಳ್ಳಿ ನರೇಂದ್ರಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಮಳವಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ.

ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಬೆಂಬಲಿಗರು ಮೈಸೂರಿನ ಗಾಂಧಿ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಭದ್ರಾವತಿಯ ಬಿ.ಕೆ. ಸಂಗಮೇಶ್ವರ, ಜೇವರ್ಗಿಯ ಅಜಯ್ ಸಿಂಗ್, ಆಳಂದದ ಬಿ,ಆರ್, ಪಾಟೀಲ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ,

ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿಯವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಚಾಮರಾಜನಗರ, ಕೊಳ್ಳೇಗಾಲದಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular