HomeKarnatakaಇಂದು ಸರ್ಕಾರಿ ಶಾಲೆ ಶಿಕ್ಷಕರ ಪ್ರತಿಭಟನೆ: ರಾಜ್ಯಾದ್ಯಂತ ಶಾಲೆಗಳು ಬಂದ್ ಸಾಧ್ಯತೆ

ಇಂದು ಸರ್ಕಾರಿ ಶಾಲೆ ಶಿಕ್ಷಕರ ಪ್ರತಿಭಟನೆ: ರಾಜ್ಯಾದ್ಯಂತ ಶಾಲೆಗಳು ಬಂದ್ ಸಾಧ್ಯತೆ

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರು ಆಗಸ್ಟ್ 12ರಂದು ತರಗತಿ ಬಹಿಷ್ಕರಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಕೈಗೊಂಡಿದ್ದಾರೆ.

ಬಹುತೇಕ ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗವಹಿಸುವುದರಿಂದ ತರಗತಿ ಚಟುವಟಿಕೆಗಳು ಸಂಪೂರ್ಣ ಬಂದ್ ಆಗುವ ಸಾಧ್ಯತೆ ಇದೆ. ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕರೆ ನೀಡಿದೆ. ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಆಗಮಿಸಲು ಶಿಕ್ಷಕರಿಗೆ ಮನವಿ ಮಾಡಲಾಗಿದೆ.

2016ರ ಮೊದಲು ನೇಮಕವಾದ ಶಿಕ್ಷಕರಿಗೆ 2017ರ ಹೊಸ ವೃಂದ ಮತ್ತು ನೇಮಕಾತಿಗಳನ್ನು ಅನ್ವಯಿಸದೆ ಒಂದರಿಂದ ಎಂಟನೇ ತರಗತಿವರೆಗೆ ಬೋಧನೆಗೆ ಅವಕಾಶ ನೀಡಬೇಕು. ಪದವಿ ಪೂರ್ಣಗೊಳಿಸಿದ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಪ್ರೌಢಶಾಲಾ ಶಿಕ್ಷಕರಾಗಿ ಭರ್ತಿಗೆ ಅವಕಾಶ ಕಲ್ಪಿಸಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಹಿಂದಿನಂತೆ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸೋಮವಾರ ಬೆಳಗ್ಗೆ 10.30 ರಿಂದ ಸಂಜೆ 5:00 ವರೆಗೆ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೋಮವಾರ ಸರ್ಕಾರಿ ಶಾಲೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ ಎಂದಿನಂತೆಯೇ ಸುಗಮವಾಗಿ ಶಾಲೆಗಳನ್ನು ನಡೆಸಬೇಕು ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular