HomeKarnatakaಹಾಸನ ರಾಸಲೀಲೆ ಪೆನ್ ಡ್ರೈವ್ ಆರೋಪಿ ಬಂಧನಕ್ಕೆ ಆಗ್ರಹಿಸಿ ನಾಳೆ ಪ್ರತಿಭಟನೆ

ಹಾಸನ ರಾಸಲೀಲೆ ಪೆನ್ ಡ್ರೈವ್ ಆರೋಪಿ ಬಂಧನಕ್ಕೆ ಆಗ್ರಹಿಸಿ ನಾಳೆ ಪ್ರತಿಭಟನೆ

ಹಾಸನ: ಪೆನ್ ಡ್ರೈವ್ ಮೂಲಕ ಮಹಿಳೆಯರ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳು ಬಿಡುಗಡೆಯಾಗಿ ಹಾಸನದಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು, ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಶೇರ್ ಮಾಡಿದ ವ್ಯಕ್ತಿಗಳನ್ನು  ಬಂಧಿಸುವಂತೆ ಆಗ್ರಹಿಸಿ ಏಪ್ರಿಲ್ 29ರಂದು ಹಾಸನ ಜಿಲ್ಲಾ ಜನಪರ ಚಳವಳಿ ಒಕ್ಕೂಟ ಪ್ರತಿಭಟನೆ ಹಮ್ಮಿಕೊಂಡಿದೆ.

ಹಾಸನ ಜಿಲ್ಲೆಯ ಪ್ರಭಾವಿಯೊಬ್ಬರು ನೂರಾರು ಮಹಿಳೆಯರನ್ನು ಅಕ್ರಮವಾಗಿ ಲೈಂಗಿಕವಾಗಿ ಬಳಸಿಕೊಂಡು ಅವರ ಖಾಸಗಿ ದೃಶ್ಯಗಳನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿದ್ದು, ಈ ದೃಶ್ಯಗಳು ವ್ಯಾಪಕವಾಗಿ ಹಂಚಿಕೆಯಾಗುತ್ತಿವೆ. ಆ ದೃಶ್ಯಗಳಲ್ಲಿ ಇರುವ ಮಹಿಳೆಯರ ಬದುಕು ಛಿದ್ರವಾಗಿದೆ. ಆದರೆ, ಪ್ರಭಾವಿ ವ್ಯಕ್ತಿ ಮತ್ತು ಇವುಗಳನ್ನು ಸಾರ್ವಜನಿಕವಾಗಿ ಹರಡುತ್ತಿರುವ ವ್ಯಕ್ತಿಗೆ ಯಾವುದೇ ಶಿಕ್ಷೆಯಾಗುತ್ತಿಲ್ಲ. ಇಂತಹ ವಿಕೃತದಿಂದಾಗಿ ಜಿಲ್ಲೆಯ ಜನ ತಲೆತಗ್ಗಿಸುವಂತಾಗಿದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಸಾರ್ವಜನಿಕವಾಗಿ ದೃಶ್ಯಗಳನ್ನು ಹರಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular