HomeKarnatakaಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಿ

ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಿ

ಮೈಸೂರು- ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ಉತ್ತಮ ಆರೋಗ್ಯ ಸೇವೆ ಒದಗಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು.

ಇಂದು ಮೈಸೂರಿನ ಕೆ ಆರ್ ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಹಿರಿಯ ಸಿಬ್ಬಂದಿಯೊಂದಿಗೆ ಸಭೆ ನಡೆಸಿದ ಸಚಿವರು, ಆಸ್ಪತ್ರೆಯ ಪ್ರಸ್ತುತ ಕಾರ್ಯನಿರ್ವಹಣೆ, ಆಡಳಿತಾತ್ಮಕ ವಿಚಾರಗಳು, ವೈದ್ಯಕೀಯ ಸಿಬ್ಬಂದಿಯ ಅಗತ್ಯತೆಗಳು ಹಾಗೂ ಆಸ್ಪತ್ರೆಯಲ್ಲಿ ಎದುರಾಗಿರುವ ವಿವಿಧ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚೆ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಮಾತನಾಡಿದ ಅವರು ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸಿರುವ ಬಡವರು ಹಾಗೂ ಸಾಮಾನ್ಯ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸಕಾಲದಲ್ಲಿ ಉತ್ತಮ ಚಿಕಿತ್ಸೆ ದೊರೆಯಬೇಕು. ಆಸ್ಪತ್ರೆಯಲ್ಲಿ ವೈದ್ಯರು, ಶುಶ್ರೂಷಕರು ಹಾಗೂ ಇತರ ಸಿಬ್ಬಂದಿಯ ಕೊರತೆ, ಅಗತ್ಯ ವೈದ್ಯಕೀಯ ಸೌಲಭ್ಯಗಳು ಮತ್ತು ಮೂಲಸೌಕರ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ ಎಂದರು.

ಆಸ್ಪತ್ರೆಯಲ್ಲಿನ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಗುರುತಿಸಿ, ಅವುಗಳ ಪರಿಹಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ, ಉತ್ತಮ ನಿರ್ವಹಣೆ ಹಾಗೂ ಸಕಾಲಿಕ ವೈದ್ಯಕೀಯ ಸೇವೆ ದೊರೆಯುವಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಯಾವುದೇ ಲೋಪವಾಗದಂತೆ ನಿರಂತರ ನಿಗಾ ವಹಿಸುವುದರ ಜೊತೆಗೆ, ಕೆ.ಆರ್. ಆಸ್ಪತ್ರೆಯನ್ನು ಮತ್ತಷ್ಟು ಸಮರ್ಥವಾಗಿ ಅಭಿವೃದ್ಧಿಪಡಿಸಿ ಜನಸ್ನೇಹಿ ಆರೋಗ್ಯ ಸೇವಾ ಕೇಂದ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಮಲ್ಲಿಕಾರ್ಜುನ ಬಾಲದಂಡಿ, ಕೆ.ಆರ್. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಶೋಭಾ, ಡೀನ್ ಡಾ. ಮುದಸ್ಸಿರ್, ಆರ್‌ಎಂಒ ಡಾ. ನಯಾಜ್ ಪಾಷಾ ಸೇರಿದಂತೆ ಆಸ್ಪತ್ರೆಯ ಹಿರಿಯ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular