ಚಿತ್ರದುರ್ಗ : ಭರಮಸಾಗರ ಹಾಗೂ ಹೊಸದುರ್ಗ ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿ ಇರುವ ಅಂಗನಾವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿ ಮಾಡಲು 05-08-2025 ರಂದು ಅಧಿಸೂಚನೆ ಹೊರಡಿಸಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 12-03-2026 ರಂದು ನಡೆದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬAಧಪಟ್ಟ ತಾಲ್ಲೂಕು ಶಿಶು ಅಭಿವೃದ್ಧಿ ಯೊಜನಾಧಿಕಾರಿಗಳ ಕಚೇರಿ ಸೂಚನಾ ಫಲಕ, ಅಂಗನವಾಡಿ ಕೇಂದ್ರ, ಗ್ರಾಮ ಪಂಚಾಯಿತಿ, ಶಾಲೆ, ಸಮುದಾಯ ಭವನ ಹಾಗೂ ಗ್ರಂಥಾಲಯಗಳಲ್ಲಿ ಪ್ರಕಟಿಸಲಾಗಿದೆ. ಸದರಿ ಆಯ್ಕೆ ಪಟ್ಟಿಗಳಿಗೆ ಆಕ್ಷೇಪಣೆಗಳು ಏನಾದರೂ ಇದ್ದಲ್ಲಿ, ಚಿತ್ರದುರ್ಗಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ನಗರದ ಜಿಲ್ಲಾ ಕ್ರೀಡಾಂಗಣದ ಹತ್ತಿರದ ಬಾಲ ಭವನ ಆವರಣದಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ, ಭರಮಸಾಗರಕ್ಕೆ ಸಂಬAಧಿಸಿದAತೆ ಚಿತ್ರದುರ್ಗ ನಗರದ ತುರವನೂರು ರಸ್ತೆಯ ಬಸಪ್ಪ ಆಸ್ಪತ್ರೆಯ ಹತ್ತಿರ ಇರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಹಾಗೂ ಹೊಸದುರ್ಗಕ್ಕೆ ಸಂಬಂಧಿಸಿದಂತೆ ಹೊಸದರ್ಗು ಪಟ್ಟಣದ ಟಿ.ಬಿ.ವೃತ್ತದಲ್ಲಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದ ಕಟ್ಟಡದಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸೂಕ್ತ ದಾಖಲೆಗಳೊಂದಿಗೆ ದಿನಾಂಕ 10-04-2026 ರ ಸಂಜೆ 5:30ರ ಒಳಗಾಗಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

