ಬೆಂಗಳೂರು ನಗರ ಜಿಲ್ಲೆ : ಶಿಶು ಅಭಿವೃದ್ಧಿ ಯೋಜನೆ, ಬೆಂಗಳೂರು ಉತ್ತರ ಯೋಜನಾ ವ್ಯಾಪ್ತಿಗೆ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 42 ಅಂಗನವಾಡಿ ಕಾರ್ಯಕರ್ತೆಯರು ಮತ್ತು 183 ಸಹಾಯಕಿಯರ ಹುದ್ದೆಗಳಿಗೆ ಗೌರವ ಧನ ಆಧಾರದ ಮೇಲೆ ತಾತ್ಕಾಲಿಕವಾಗಿ ಆಯ್ಕೆಯಾಗಿರುವ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಕಛೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಇದ್ದಲ್ಲಿ ನವೆಂಬರ್ 05, 2025 ರ ಸಂಜೆ 5.30 ರೊಳಗಾಗಿ ಅವಕಾಶವಿದ್ದು, ಆಕ್ಷೇಪಣೆ ಸಲ್ಲಿಸುವವರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಮಿನಿ ವಿಧಾನ ಸೌಧ (ನೆಲಮಹಡಿ), ಯಲಹಂಕ-ಬೆಂಗಳೂರು ಉತ್ತರ ತಾಲ್ಲೂಕು ಇಲ್ಲಿಗೆ ಸೂಕ್ತ ದಾಖಲಾತಿಗಳೊಂದಿಗೆ ಕಛೇರಿ ವೇಳೆಯಲ್ಲಿ ಸಲ್ಲಿಸಬಹುದು ಎಂದು ಬೆಂಗಳೂರು ಉತ್ತರ ತಾಲ್ಲೂಕು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
