HomeKarnatakaಸಹಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ, ಆಕ್ಷೇಪಣೆ ಸಲ್ಲಿಸಲು ಸೆ.22 ರವರೆಗೆ ಅವಕಾಶ

ಸಹಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ, ಆಕ್ಷೇಪಣೆ ಸಲ್ಲಿಸಲು ಸೆ.22 ರವರೆಗೆ ಅವಕಾಶ

ಶಿವಮೊಗ್ಗ : ಶಾಲಾ ಶಿಕ್ಷಣ ಇಲಾಖೆಯು ಬೆಂಗಳೂರು ವಿಭಾಗದ ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರು ಗ್ರೇ-2 ವೃಂದದ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಇಲಾಖಾ ವೆಬ್ಸೈಟ್ https://schooleducation.kar.nic.in/htmlkn/smteachers.html ರ ಸೇವಾ ವಿವರಗಳ ಕ್ರ.ಸಂ.: 82ರಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ, ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ.

ಈ ಕರಡು ತಾತ್ಕಾಲಿಕ ಜೇಷ್ಠತಾ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಇದ್ದಲ್ಲಿ ಸಂಬಂಧಿಸಿದ ಶಿಕ್ಷಕರು ಸಮರ್ಥನೀಯ ಪೂರಕ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ಸೆ.22 ರೊಳಗಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ನೇರವಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular